50 ಲಕ್ಷ ಮೌಲ್ಯದ ತಿಮಿಂಗಿಲ ವಾಂತಿ ಸಾಗಿಸುತ್ತಿದ್ದ ಮೂವರ ಬಂಧನ :
ಲಕ್ಷಾಂತರ ರೂ. ಬೆಲೆಬಾಳುವ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಭಾನುವಾರ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾಲು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಾಗರ ತಾಲ್ಲೂಕಿನ ಕೆಳದಿ ರಸ್ತೆಯ ರಾಮಪ್ಪ (40), ಕಾರ್ಗಲ್‌ನ ಸಂದೀಪ್ ಜಾನ್ (49), ಸಾಗರ ನೆಹರೂ ನಗರದ ರೋಹಿತ್ (42) ಬಂಧಿತರು. ಸಾಗರ ರೈಲ್ವೆ ನಿಲ್ದಾಣದ ಬಳಿ ಕಾರ್ಯಾಚರಣೆ ನಡೆಸಿ ತಿಮಿಂಗಿಲ ವಾಂತಿ (ಅಂಬರ್ಗ್ರೀಸ್) ವಶಕ್ಕೆ ಪಡೆಯಲಾಗಿದೆ. ಅರ್ಧ ಕೆ.ಜಿ…