ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ
ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್ ಅವರ…