ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!
ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ. ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ….