ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್ ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…