ನವೆಂಬರ್ ಅಂತ್ಯಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ : ಬಿ ವೈ ರಾಘವೇಂದ್ರ
ರಾಜ್ಯದ ಮಧ್ಯಭಾಗದಲ್ಲಿರುವ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಗಳು ತ್ವರಿತಗತಿಯಲ್ಲಿ ಸಾಗುತ್ತಿದ್ದು, ಶೀಘ್ರದಲ್ಲಿ ಪೂರ್ಣಗೊಂಡು ನವೆಂಬರ್ ಮಾಸಾಂತ್ಯಕ್ಕೆ ಲೋಕಾರ್ಪಣೆಗೊಳಿಸಲು ಅಗತ್ಯವಿರುವ ಎಲ್ಲಾ ತಯಾರಿಗಳು ನಡೆದಿವೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶುಕ್ರವಾರ ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಗಳನ್ನು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಈ ಅವಧಿಯೊಳಗಾಗಿ ವಿಮಾನ ನಿಲ್ದಾಣಕ್ಕೆ ಅಗತ್ಯವಾಗಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವೂ ಭರದಿಂದ ಸಾಗಿದೆ. ಅಲ್ಲದೆ ಟರ್ಮಿನಲ್ ಕಟ್ಟಡ ಮತ್ತಿತರ ಎಲ್ಲಾ ಸೌಲಭ್ಯಗಳೂ…