ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.
ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…