Headlines

ಮಗನಿಗಾಗಿ ಮತ್ತೆ ಜೊತೆಯಾದ ತಂದೆ-ತಾಯಿ

ವಿಚ್ಚೇದನ ಪಡೆಯಲು ಮುಂದಾಗಿದ್ದ ತಂದೆ ಮತ್ತು ತಾಯಿಯನ್ನು ಅವರ 10ನೇ ತರಗತಿಯ ಮಗ ಒಂದು ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಶಿವಮೊಗ್ಗೆ ಜಿಲ್ಲೆ ಹೊಸನಗರ ತಾಲೂಕಿನ ಕಡೆಗದ್ದೆಯ ನಿವಾಸಿಗಳಾದ ಗಣೇಶಮೂರ್ತಿ ಮತ್ತು ಪೂರ್ಣಿಮಾ ದಂಪತಿ  17 ವರ್ಷಗಳ ಕಾಲ ಸುಖವಾಗಿ ಸಂಸಾರ ನಡೆಸಿದ್ದರು.ಸಣ್ಣದಾದ ಮನಸ್ತಾಪದಿಂದಾಗಿ ಮೂರು ವರ್ಷದ ಹಿಂದೆ ತವರು ಸೇರಿದ್ದ ಪೂರ್ಣಿಮಾ ಮರಳಿ ಗಂಡನ ಮನೆಗೆ ಬಂದಿರಲಿಲ್ಲ. ಕಳೆದ ಮೂರು ವರ್ಷಗಳಿಂದ ದೂರ ಇದ್ದ ದಂಪತಿ, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತ…

Read More

ಅಕಾಲಿಕ ಮರಣಕ್ಕೆ ತುತ್ತಾದ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಪಟು : ಮೃತ ಬಾಲಕನ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಆರ್ಥಿಕ ನೆರವು

ರಿಪ್ಪನ್ ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದ ರಾಷ್ಟ್ರ ಮಟ್ಟದ ವಾಲಿಬಾಲ್ ಕ್ರೀಡಾಪಟು ಭರತ್ ರಾಜ್ (ಬೆಳ್ಳಿ) ಎಂಬ ಬಾಲಕ 21-10-2021 ರಂದು ಹಾರಂಬಳ್ಳಿ ಮನೆಯ ಸಮೀಪ ಪ್ರಕೃತಿ ವಿಕೋಪದಲ್ಲಿ ಮೃತಪಟ್ಟಿದ್ದನು. ಇಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಮೃತ ಭರತ್ ರಾಜ್ ರವರ ತಾಯಿ ಶ್ರೀಮತಿ ಲಕ್ಷ್ಮಿ ವಾಸುದೇವ ರವರಿಗೆ ಪ್ರಕೃತಿ ವಿಕೋಪ ನಿಧಿಯಿಂದ ಮಂಜೂರಾದ 5 ಲಕ್ಷ ರೂ ಗಳ ಪರಿಹಾರದ ಆದೇಶ ಪ್ರತಿಯನ್ನು ಹಸ್ತಾಂತರಿಸಿ, ಸಾಂತ್ವನ ಹೇಳಿದರು. ಇಂದು…

Read More

ರಿಪ್ಪನ್ ಪೇಟೆ : ದಾಖಲೆಗಳನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಯೋಜನೆಗೆ ಚಾಲನೆ :

ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ದಾಖಲೆಗಳಾದ ಪಹಣಿ, ಅಟ್ಲಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ರಿಪ್ಪನ್‌ಪೇಟೆಯ ಬರುವೆ ಗ್ರಾಮದ ಸುರೇಶ್, ಲೇಖಪ್ಪ ಎಂಬುವವರ ಮನೆಗೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಶನಿವಾರ ಚಾಲನೆ ನೀಡಿ ಮಾತನಾಡಿ, ಇನ್ನೂ ಮುಂದೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಕೆಲವು…

Read More

ಸಂಘದ ಬಾಕಿ ಹಣ ಕೇಳಲು ಹೋದ ಮಹಿಳೆಯರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ರಿಪ್ಪನ್ ಪೇಟೆ : ಸಂಘದ ಬಾಕಿ ಹಣ ಕೇಳಲು ಹೋದ ಸಂಘದ ಮಹಿಳೆಯರ ಮೇಲೆಯೇ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಘಟನೆ ಕಮದೂರು ಗ್ರಾಮದಲ್ಲಿ ನಡೆದಿದೆ. ಕಮದೂರು ಗ್ರಾಮದ ಭಾಗಿರಥಮ್ಮ ಎಂಬುವವರು ಶ್ರೀ ರೇಣುಕಾಂಬ ಸಂಘ ಆಲುವಳ್ಳಿ ಯ ಸದಸ್ಯೆಯಾಗಿದ್ದು ಸಾಲ ಪಡೆದಿರುತ್ತಾರೆ.ಕಳೆದ ಹಲವಾರು ದಿನಗಳಿಂದ ಸಾಲ ಮರು ಪಾವತಿ ಮಾಡುತ್ತಿಲ್ಲವೆಂದು ಸಂಘದ ಎಲ್ಲಾ ಸದಸ್ಯರು ಅವರ ಮನೆಗೆ ಸಾಲ ವಸೂಲಿಗೆ ಹೋಗಿದ್ದಾರೆ.ಈ ಸಂಧರ್ಭದಲ್ಲಿ ಭಾಗಿರಥಮ್ಮ ರವರ ಮಗ ಸತೀಶ್ ಎಂಬುವವನು ಸಾಲ ವಸೂಲಿಗೆ ಹೋಗಿದ್ದ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರ ವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು

ರಿಪ್ಪನ್ ಪೇಟೆ : ಶ್ರೀ ನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿದ ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸಿನ ಮಂತ್ರಿ ಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೆ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ  ಶ್ರೀ ರೇಣುಕಾನಂದ ಸ್ವಾಮೀಜಿಗಳು ಅಭಿನಂದಿಸಿದ್ದಾರೆ  ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶ್ರೀನಾರಾಯಣಗುರು ವಸತಿ ಶಾಲೆ ಹಾಗೂ ಸಮುದಾಯದ ಅಭಿವೃದ್ಧಿಗೆ ಅನುದಾನ ನೀಡಿರುವ ಕ್ರಮ ಶ್ಲಾಘನೀಯ.  ಸಾಮಾಜಿಕ ಕ್ರಾಂತಿಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳ…

Read More

ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ರವರ ಹೆಸರಿಡಬೇಕೆಂದು ಜಿಲ್ಲೆಯ ಜನ ಪ್ರತಿನಿಧಿಗಳಿಂದ ಮುಖ್ಯಮಂತ್ರಿಗೆ ಮನವಿ…

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಬೇಕೆಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ನೇತೃತ್ವದ ನಿಯೋಗ ಸಿಎಂ ಅವರನ್ನು ಭೇಟಿ ಮಾಡಿ, ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರನ್ನು ನಾಮಕರಣ ಮಾಡುವ ಕುರಿತು ಚರ್ಚೆ ಮಾಡಲಾಯಿತು.  ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಅರಗ ಜ್ಞಾನೆಂದ್ರ, ಸಂಸದ ಬಿ.ವೈ. ರಾಘವೇಂದ್ರ,…

Read More

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿದ ಹಿನ್ನಲೆ ಅನಾಥಶ್ರಮಕ್ಕೆ ಸಿಹಿ ಹಂಚಿ,ದಿನಸಿ ಸಾಮಾಗ್ರಿ ವಿತರಿಸಿ ವಿಜಯೋತ್ಸವ ಆಚರಿಸಿದ ಆಪ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ಆರ್ಥಿಕ, ಸಾಮಾಜಿಕ, ಧಾರ್ಮಿಕ ಭಷ್ಟಾಚಾರ ನಿರ್ಮೂಲನೆ ಮಾಡುವುದರೊಂದಿಗೆ ಸರ್ವಸಮತೆಯ ರಾಷ್ಟ್ರ ನಿರ್ಮಾಣ ಮಾಡುವುದು ಅಮ್ಆದ್ಮಿ ಪಕ್ಷದ ಉದ್ದೇಶವಾಗಿದೆ ಎಂದು ಎಎಪಿ ಮುಖಂಡ ಹನೀಫ್ ಹೇಳಿದರು. ಸಮೀಪದ ಚಿಕ್ಕಜೇನಿ ಪದ್ಮಶ್ರೀ ಅನಾಥಾಶ್ರಮದಲ್ಲಿ ಶುಕ್ರವಾರ ಪಂಜಾಬ್ ರಾಜ್ಯದಲ್ಲಿ ಆಮ್ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿರುವ ಹಿನ್ನೆಲೆಯಲ್ಲಿ ಅನಾಥರಿಗೆ ಸಿಹಿ ಹಾಗೂ ಅಗತ್ಯ ದಿನಸಿ ಸಾಮಾನು ವಿತರಿಸಿ ಮಾತನಾಡಿ ನಮ್ಮ ವಿಜಯೋತ್ಸವ ಅರ್ಥಪೂರ್ಣವಾದದು ಈಗಾಗಲೆ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ದೆಹಲಿ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣದಲ್ಲಿ ಕ್ರಾಂತಿಕಾರಿಕ…

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದ ಆರೋಪಿಯ ಬಂಧನ

ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ  ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ. ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು…

Read More

ರಿಪ್ಪನ್ ಪೇಟೆ :ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕರಲ್ಲಿ ಅಭೂತಪೂರ್ವ ಗೆಲುವಿನ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ :

ರಿಪ್ಪನ್ ಪೇಟೆ : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ‌ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರ ದ ವತಿಯಿಂದ  ವಿಜಯೋತ್ಸವ ಆಚರಿಸಲಾಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ,ವಿಜಯೋತ್ಸವ ಆಚರಿಸಿದರು.ಈ ಸಂಧರ್ಭದಲ್ಲಿ ಪ್ರಧಾನಿ ಮೋದಿ,ಮುಖ್ಯಮಂತ್ರಿ ಬೊಮ್ಮಾಯಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾ ನಾಥ್ ,ಯಡಿಯೂರಪ್ಪ ಹಾಗೂ ಶಾಸಕ ಹರತಾಳು ಹಾಲಪ್ಪ ಪರವಾಗಿ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ಜೊತೆ ಮಾತನಾಡಿದ…

Read More