ಕಳಪೆ ಕಾಮಗಾರಿ, ಗ್ರಾಮಸ್ಥರ ಪ್ರತಿಭಟನೆ
ರಿಪ್ಪನ್‌ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲ್ಲೂರು ಸರ್ಕಾರಿ ಕಿರಿಯ ಶಾಲೆಯ ನೆಲ ಹಾಸಿಗೆ ಟೈಲ್ಸ್ ಅಳವಡಿಕೆ ಕಾಮಗಾರಿ ಕಳಪೆ ಗುಣಮಟ್ಟ ಹೊಂದಿದೆ ಎಂದು ಆರೋಪಿಸಿರುವ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬಿಜೆಪಿ ಮುಖಂಡ ಆದರ್ಶಗೌಡ ಕಲ್ಲೂರು ಮಾತನಾಡಿ ಶಾಲೆ ನೆಲಹಾಸು ಕಾಮಗಾರಿಗೆ ಒಂದುವರೆ ಲಕ್ಷ ರೂಪಾಯಿ ಅನುದಾನ ಮಂಜೂರಾಗಿರುವ ಬಗ್ಗೆ ಗುತ್ತಿಗೆದಾರ ತಿಳಿಸಿರುತ್ತಾನೆ. ಆದರೆ ಕಾಮಗಾರಿ ಮಂಜೂರಾತಿ ವಿಷಯ ಶಾಲಾಭಿವೃದ್ಧಿ ಸಮಿತಿಗಾಗಲೀ, ಸ್ಥಳೀಯರೇ ಆದ ಗ್ರಾಮ ಪಂಚಾಯತಿ ಅಧ್ಯಕ್ಷರಿಗಾಗಲೀ ಹಾಗೂ ಗ್ರಾಮಸ್ಥರಿಗಾಗಲೀ ಮಾಹಿತಿ ಇರುವುದಿಲ್ಲ. ಏಕಾಏಕಿ ಬುಧವಾರ…