Headlines

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More

ರಿಪ್ಪನ್‌ಪೇಟೆ : ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್ ವಶಕ್ಕೆ|sandmafia

ರಿಪ್ಪನ್‌ಪೇಟೆ : ಮಲೆನಾಡು ಭಾಗದಲ್ಲಿ ಅಕ್ರಮ ಮರಳು ಮಾಫ಼ಿಯಾದ ಹೆಡೆಮುರಿ ಕಟ್ಟುವಲ್ಲಿ ಪಟ್ಟಣದ ಪೊಲೀಸ್ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ ಪಟ್ಟಣದ ಪಿಎಸ್ ಐ ಶಿವಾನಂದ ಕೆ ನೇತ್ರತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಹರತಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು…

Read More

ಬಾವಿಯಲ್ಲಿ ಪೌರಕಾರ್ಮಿಕನ ಮೃತದೇಹ ಪತ್ತೆ|dead body found in

ಬಾವಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ KSRTC ಬಸ್ ನಿಲ್ದಾಣದ ಪಕ್ಕವಿರುವ ಬಿಎಂವಿ ಪಾರ್ಕಿಂಗ್ ಮತ್ತು ಎಸ್ ಡಿಪಿ ಪಾರ್ಕಿಂಗ್ ಮಧ್ಯ ಇರುವ ಬಾವಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಬಾವಿಯಲ್ಲಿ ಪತ್ತೆಯಾದ ಮೃತ ದೇಹವನ್ನ ಮಾರ್ನಮಿಬೈಲು ನಿವಾಸಿ ದಿಬ್ಬಯ್ಯ (52) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ದಿಬ್ಬಯ್ಯ ಕಳೆದ ಐದು ದಿನಗಳಿಂದ ಮನೆಗೆ ಹೋಗಿರಲಿಲ್ಲ ಎಂದು ಕುಟುಂಬ ತಿಳಿಸಿದೆ. ನಾಪತ್ತೆಯಾಗಿದ್ದ ಮನೆಯವರೂ ಹುಡುಕಾಡುತ್ತಿದ್ದರು. ಆದರೆ ಪಾರ್ಕಿಂಗ್ ಸ್ಥಳದಲ್ಲಿರುವ ಬಾವಿಯಲ್ಲಿ ಆತನ ಮೃತ ದೇಹ ಪತ್ತೆಯಾಗಿದೆ. ಪಾರ್ಕಿಂಗ್ ನೋಡಿಕೊಳ್ಳುವ…

Read More

SSLC ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟಣೆ – ಈ ಬಾರಿ ಮುಂಚಿತವಾಗಿ ನಡೆಯಲಿದೆ ಅಂತಿಮ ಪರೀಕ್ಷೆ: ವಿವರಗಳಿಗೆ ಈ ಸುದ್ದಿ ನೋಡಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ ಪ್ರಕಟವಾಗಿದ್ದು ಮಾ.31 ರಿಂದ ಏ.15ರ ವರೆಗೆ ಪರೀಕ್ಷೆ ನಡೆಯಲಿದೆ. 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂಚಿತವಾಗಿ ನಡೆಯಲಿದೆ. ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ ದಿನಾಂಕ 04-04-2023, ಮಂಗಳವಾರ – ಕೋರ್ ಸಬ್ಜೆಕ್ಟ್ – ಗಣಿತ ಮತ್ತು ಸಮಾಜಶಾಸ್ತ್ರ ದಿನಾಂಕ 06-04-2023,…

Read More

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅಗ್ನಿ ಅವಘಡ – ಬೆಂಕಿ ರಿಂಗ್ ಜಿಗಿತ ಪ್ರದರ್ಶನದ ವೇಳೆ ವಿದ್ಯಾರ್ಥಿಗೆ ಗಂಭೀರ ಗಾಯ|Fire

ಹೊಸನಗರ : ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯಿಂದ ಓರ್ವ ವಿದ್ಯಾರ್ಥಿಗೆ ಸುಟ್ಟಗಾಯಗಳಾಗಿರುವ ಘಟನೆ ಪಟ್ಟಣದ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶನಿವಾರ ರಾತ್ರಿ ಜರುಗಿದೆ. ಮೂರು ದಿನಗಳ ಶಾಲಾ ವಾರ್ಷಿಕೋತ್ಸವ ಸಂದರ್ಭದಲ್ಲಿ ಕೊನೆ ದಿನವಾದ ಶನಿವಾರ ರಾತ್ರಿ ವಿದ್ಯಾರ್ಥಿಗಳಿಂದ ಪಿರಮಿಡ್ ನಿರ್ಮಾಣ ಹಾಗೂ ಬೆಂಕಿಯ ರಿಂಗ್ ಒಳಗಿನ ಜಿಗಿತದ ವೇಳೆ ಘಟನೆ ಸಂಭವಿಸಿದೆ. ಮೂಲತಃ ಬೆಂಗಳೂರಿನ ಬನಶಂಕರಿ ಬಡಾವಣೆಯ ವಾಸಿಯಾದ ಅದೇ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಸಿಂಹಾದ್ರಿಗೆ ಘಟನೆಯಿಂದ ಮುಖ, ಕಣ್ಣು, ಕಿವಿಗಳಿಗೆ ಸುಟ್ಟಗಾಯಗಳಾಗಿದೆ….

Read More

ರಿಪ್ಪನ್‌ಪೇಟೆ : ವರಾನಹೊಂಡದ ಭೂತರಾಯ ದೇವಸ್ಥಾನದಲ್ಲಿ ಹುಂಡಿ ಒಡೆದು ಕಳ್ಳತನ|Theft

ರಿಪ್ಪನ್ ಪೇಟೆ :  ಇಲ್ಲಿನ ಸಮೀಪದ ವರಾನಹೊಂಡದ  ಭೂತರಾಯನ ಗುಡಿಯಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡದ ಶ್ರೀ ಭೂತರಾಯ ಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಒಡೆದು ಕಳ್ಳತನ ಮಾಡಿದ್ದಾರೆ.ಭಾನುವಾರ ರಾತ್ರಿ ಕಳ್ಳತನ ನಡೆದಿರುವ ಸಾಧ್ಯತೆ ಇದೆ. ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ವರಾನಹೊಂಡದ ಭೂತರಾಯ ದೇವಸ್ಥಾನವೆಂದರೆ ಅಪಾರ ಭಕ್ತಿ ಹಾಗೂ ಭಯ, ನಂಬಿಕೆ ಇರುವ ಸ್ಥಳವಾಗಿದ್ದು ಈ ಕ್ಷೇತ್ರದಲ್ಲಿ ಕಳ್ಳರು ಕೈಚಳಕ ತೋರಿಸಿರುವುದು ಅವರ ಅವನತಿಗೆ ದಾರಿಯಾಗಿದೆ ಎಂದು…

Read More

ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳ ಅಟ್ಟಹಾಸ – ನಿಷೇಧಿತ ಸಂಘಟನೆಯ ಗೋಡೆ ಬರಹ|shiralakopppa

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್‌ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದ ವಿವಿಧ ಕಡೆಗಳಲ್ಲಿ ಕಿಡಿಗೇಡಿಗಳು ಜಾಯಿನ್ ಸಿಎಫ್‌ಐ ಎಂಬ ಗೋಡೆ ಬರಹ ಬರದಿದ್ದಾರೆ. ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲೆಲ್ಲಿ ಗೋಡೆ ಬರಹಗಳು? ಹಳೆಯ ಪೆಟ್ರೋಲ್ ಬಂಕ್ ಪಕ್ಕದ ಕಂಬ, ಭೋವಿ ಕಾಲೋನಿಗೆ ಹೋಗುವ ರಸ್ತೆಯಲ್ಲಿ ವಿದ್ಯುತ್ ಕಂಬ,…

Read More

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ನವವಿವಾಹಿತೆ ಆತ್ಮಹತ್ಯೆ – ಪ್ರಕರಣ ದಾಖಲು|Dowry case

ನೂರಾರು ಕನಸು ಹೊತ್ತು ಮದುವೆಯಾಗಿದ್ದ ನವ ವಿವಾಹಿತೆ ವರದಕ್ಷಿಣೆ ಭೂತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಶಿಕಾರಿಪುರದ ಶಿರಾಳಕೊಪ್ಪದ ಉಡುಗುಣಿ ಗ್ರಾಮದಲ್ಲಿ ನಡೆದಿದೆ. ನವವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಳೆದ ವರ್ಷವಷ್ಟೇ ಮದುವೆಯಾಗಿದ್ದ ಸಂಗೀತಾ ಅನುಮಾನಸ್ಪದವಾಗಿ ಸಾವನಪ್ಪಿದ್ದು, ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಡ, ಅತ್ತೆ ಮಾವನ ಕಿರುಕುಳಕ್ಕೆ ಅಮಾಯಕ ಜೀವ ಬಲಿಯಾಗಿದ್ದು, ಸಂಗೀತಾ ನೂರಾರು ಕನಸು ಹೊತ್ತು ಹರೀಶ್ ಎಂಬಾತನ ಜೊತೆ ಮದುವೆಯಾಗಿದ್ದರು. ಸಂಗೀತಾ ಪೋಷಕರು ಚಿನ್ನ, ಹಣ ಕೊಟ್ಟು ಅದ್ದೂರಿಯಾಗಿ ಮದುವೆ ಮಾಡಿದ್ದರು. ಮದುವೆಯಾದ ಆರು ತಿಂಗಳಿಗೆ…

Read More

ಸಾಗರದ ಬಳಿ ಹೊಸನಗರದ ಓಮಿನಿ‌ ಕಾರು ಅಪಘಾತ – ಜಖಂಗೊಂಡ ಕಾರಿನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯ ಜೀವ ಉಳಿಸಿದ 112 ಸಿಬ್ಬಂದಿ|Accident

ಹೊಸನಗರದಿಂದ ಕುಮುಟಾ ಕಡೆಗೆ ತೆರಳುತಿದ್ದ ಮಾರುತಿ ಓಮಿನಿ ಕಾರು  ಆಕ್ಸಿಡೆಂಟ್​ ಆಗಿ, ಜಖಂ ಆದ ವಾಹನದಲ್ಲಿ ಸಿಲುಕಿ ನರಳುತ್ತಿದ್ದ ವ್ಯಕ್ತಿಯನ್ನು 112 ಸಿಬ್ಬಂದಿ ಕಾಪಾಡಿದ್ಧಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  ನಿನ್ನೆ ಬೆಳಗ್ಗಿನ ಜಾವ ಸಾಗರ ತಾಲ್ಲೂಕಿನ ಶಿರವಂತೆ ಬಳಿ ಅಪಘಾತವೊಂದು ಸಂಭವಿಸಿತ್ತು. ಹೊಸನಗರ ಮೂಲದ ಪ್ರವೀಣ್ ಓಮಿನಿ ಕಾರಿನಲ್ಲಿ  ಕುಮಟಾಕ್ಕೆ ಹೋಗುತ್ತಿದ್ದ ಸಂಧರ್ಭದಲ್ಲಿ ಅಪಘಾತವಾಗಿತ್ತು. ತಕ್ಷಣ ಸ್ಥಳೀಯರು 112 ಸಿಬ್ಬಂದಿ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ವಿಚಾರ ಕೇಳಿ ತಕ್ಷಣ…

Read More