ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :
ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…