ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ…


