Headlines

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಾಸಕ ಹರತಾಳು ಹಾಲಪ್ಪ !!!

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಾಸಕ ಹರತಾಳು ಹಾಲಪ್ಪ ಸಾಗರ ಹಾಗೂ ಹೊಸನಗರ  ಕ್ಷೇತ್ರದ ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಕಮಿಶನ್ ಪಡೆದಿದ್ದಾರೆಂದು ಆರೋಪ ಮಾಡಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ತಾವು ಆಣೆ ಮಾಡಬೇಕು ಹಣವನ್ನು ಪಡೆದಿಲ್ಲವೆಂದು ಎಂದು ಸವಾಲು ಎಸೆದಿದ್ದರು. ಇದರ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ಹರತಾಳು ಹಾಲಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳದ ಸನ್ನಿಧಿಯಲ್ಲಿ ನಾವು ಯಾವುದೇ  ಮರಳು ಲಾರಿ ಮಾಲೀಕರಿಂದ ಕಮೀಷನ್ ಹಾಗೂ ಹಣ ಪಡೆದಿಲ್ಲವೆಂದು ಪ್ರಮಾಣ ಮಾಡಿದ್ದಾರೆ. ಬೇಳೂರು ಮಾಡಿರುವ ಆರೋಪಗಳು…

Read More

ಫೆ. 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ :

ಸಮವಸ್ತ್ರ ವಿವಾದದ ಹಿನ್ನೆಲೆ ರಾಜ್ಯದ ಎಲ್ಲಾ ಪಿಯುಸಿ, ಪದವಿ, ಪಿಜಿ  ತರಗತಿಗಳಿಗೆ ಫೆ.16 ವರೆಗೆ ರಜೆ ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ  ಹೊರಡಿಸಿದೆ. ಹೌದು, ರಾಜ್ಯದ ಸಮವಸ್ತ್ರ ವಿವಾದ ಭುಗಿಲೆದ್ದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ತರಗತಿಗಳನ್ನು ಫೆ.16 ವರೆಗೆ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಫೆಬ್ರವರಿ 16ರ ವರೆಗೆ ರಾಜ್ಯಾದ್ಯಂತ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಮುಂದುವರಿಕೆ…

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಪತ್ರೀಕಾ ಹೇಳಿಕೆ ನೀಡಿದ್ದಾರೆ. ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಹೇಳಿದ್ದಾದರು ಏನು?? ಶಾಸಕ ಹಾಲಪ್ಪನವರೆ ಏನ್ ಹೇಳಿದ್ರಿ ನಾನು ಪಲಾಯನವಾದಿ ಅಂತಾನ??  ಹೇಳೋಕೆ ಮೊದಲು ಯೋಚನೆ ಮಾಡಿ ಧರ್ಮಸ್ಥಳದ ಆಣೆಪ್ರಮಾಣಕ್ಕೆ ನೀವು ಮೋದಲು…

Read More

ಸಾಗರದಲ್ಲಿ ಪ್ರತಿಭಟನಾ ನಿರತ “ಬ್ಯಾಂಕ್ ಮಿತ್ರ” ಉದ್ಯೋಗಿ ಆತ್ಮಹತ್ಯೆಗೆ ಯತ್ನ : ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಬ್ಯಾಂಕ್ ಮಿತ್ರ ಉದ್ಯೋಗಿಗಳ ಪ್ರತಿಭಟನೆ

ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬ್ಯಾಂಕ್ ಮಿತ್ರರ ಸಂಘ ಮತ್ತು ಮಾನವ ಹಕ್ಕುಗಳ ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ, ದೀವರ ಯುವ ವೇದಿಕೆ ಸಹಯೋಗದೊಂದಿಗೆ ಕೆಳದಿ ಕೆನರಾ ಬ್ಯಾಂಕ್ ನಿಂದ ಬ್ಯಾಂಕ್ ಮಿತ್ರರನ್ನು ವಜಾಗೊಳಿಸಿರುವ ನೀತಿ ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಪ್ರತಿಭಟನಾ ನಿರತ ಬ್ಯಾಂಕ್ ಮಿತ್ರ ಉದ್ಯೋಗಿ ಶಕುಂತಲಾ ಎಂಬುವವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಕೂಡಲೇ ಸಹೋದ್ಯೋಗಿಗಳು ತಕ್ಷಣ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿಲಾಗಿತ್ತು,ಈಗ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ…

Read More

ಹೊಂಬುಜ ಶ್ರೀಗಳಿಂದ ಮುಖ್ಯಮಂತ್ರಿ ಭೇಟಿ :

ಜೈನ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನಮಠದ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರವರು ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮನವಿ ಪತ್ರವನ್ನು ನೀಡಿದರು. ಮನವಿ ಪತ್ರ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಿನ ವ್ಯಾಪ್ತಿಯಲ್ಲಿ ಜೈನ ಬಾಂಧವರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹೊಂಬುಜ ಅತಿಶಯ ಮಹಾಕ್ಷೇತ್ರ ಜಗನ್ಮಾತೆಯ ದರ್ಶನಕ್ಕಾಗಿ ಆಗಮಿಸುತ್ತಾರೆ. ಭಕ್ತರಿಗೆ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತು ಸಮುದಾಯದ ಏಳಿಗೆಗೆ ಸ್ಪಂದಿಸುವಂತೆ…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಹಿಜಾಬ್ ಪ್ರಕರಣ : ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ನ್ಯಾಯದೀಶರು : ಮುಂದಿನ ಆದೇಶದವರೆಗೂ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಧಿರಿಸು ಧರಿಸುವಂತಿಲ್ಲ

 ಮುಸ್ಲಿಮ್ ವಿದ್ಯಾರ್ಥಿನಿಯರು ಧರಿಸುತ್ತಿದ್ದ ಹಿಜಾಬ್ ಮೇಲೆ ನಿಷೇಧ ಹೇರಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ಪೀಠವು ನಡೆಸಿದ್ದು, ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೆ ಯಾವುದೇ ಧಾರ್ಮಿಕ ಉಡುಪನ್ನು ಬಳಸಬಾರದು ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿ, ರಾಜ್ಯದಲ್ಲಿ ಶಾಂತಿ, ನೆಮ್ಮದಿ ಕಾಪಾಡಬೇಕು ಎಂದು ಹೇಳಿದರು. ಇದಕ್ಕೂ ಮೊದಲು ವಾದ ಮಂಡಿಸಿದ ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಹೆಗಡೆ , ಕಳೆದ ವರ್ಷದ ಸೆಪ್ಟೆಂಬರ್…

Read More

ಶಿವಮೊಗ್ಗ ವಿಮಾನ ನಿಲ್ದಾಣ ಶೀಘ್ರದಲ್ಲೇ ಲೋಕಾರ್ಪಣೆ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಯಾದ ವಿಮಾನ ನಿಲ್ದಾಣವು ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ 2ನೇ ಅತಿ ಉದ್ದದ ರನ್ ವೇ ಹೊಂದಿರುವಂತ ವಿಮಾನ ನಿಲ್ದಾಣ ಇದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಸದ ಬಿ.ವೈ.ರಾಘವೇಂದ್ರ, ಇಂದು ಕೇಂದ್ರ ನಾಗರಿಕ ವಿಮಾನ ಖಾತೆಯ ಸಚಿವರಾದ ಜ್ಯೋತಿರಾಧಿತ್ಯ ಸಿಂಧಿಯಾ ಇವರನ್ನು ಭೇಟಿ ಮಾಡಿದ್ದೇನೆ. ಶಿವಮೊಗ್ಗ ವಿಮಾನ ನಿಲ್ದಾಣ ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ, ಇದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ರಾಜ್ಯದ ಎರಡನೇ ಅತಿ…

Read More
Exit mobile version