ಹಿಜಾಬ್ – ಕೇಸರಿ ಘರ್ಷಣೆ ಹಿನ್ನಲೆ ರಾಜ್ಯಾದ್ಯಂತ ಮೂರು ದಿನ ಶಾಲಾ-ಕಾಲೇಜು ಬಂದ್ !!!! ಹಿಜಾಬ್ ಕೋರ್ಟ್ ತೀರ್ಪು ಮುಂದೂಡಿಕೆ ಹಿನ್ನಲೆ ಸಿಎಂ ಘೋಷಣೆ
ಹಿಜಾಬ್ ಮತ್ತು ಕೇಸರಿ ಶಾಲಿನ ವಿಷಯದಲ್ಲಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ರಾಜ್ಯದ ಕಾಲೇಜುಗಳಿಗೆ ಮುಂಜಾಗ್ರತಾ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳವರೆಗೆ ರಜೆ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದಾರೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಸಿಎಂ ಮನವಿ ಮಾಡಿಕೊಂಡಿದ್ದಾರೆ. ಹಿಜಾಬ್ ವಿವಾದ ಹಲವು ಜಿಲ್ಲೆಗಳಿಗೆ ವ್ಯಾಪಿಸಿದ್ದು ಕರ್ನಾಟಕ ಹೈಕೋರ್ಟ್ ವಿಚಾರಣೆಯನ್ನು…


