ಜಾಗದ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಮೊಬೈಲ್ ಟವರ್ ಏರಿದ ವ್ಯಕ್ತಿ : ಮನವೊಲಿಸಿ ಕೆಳಗಿಳಿಸುವಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಯಶಸ್ವಿ :
ಖಾಸಗಿ ವ್ಯಕ್ತಿಗಳು ತನ್ನ ಮನೆಯನ್ನು ನೆಲಸಮಗೊಳಿಸಿ ಅನ್ಯಾಯ ಎಸಗಿದ್ದಾರೆ ಹಾಗೂ ಈ ಬಗ್ಗೆ ಯಾರು ಸೂಕ್ತ ರೀತಿಯಲ್ಲಿ ನ್ಯಾಯ ದೊಕಿಸಿಕೊಟ್ಟಿಲ್ಲ ಎಂದು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಕುಳಿತ ಪ್ರಸಂಗ ಹೊಸನಗರ ತಾಲೂಕಿನ ಕೋಡೂರು ಗ್ರಾಮದಲ್ಲಿ ನಡೆಯಿತು. ಹೊಸನಗರ ತಾಲೂಕು ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡೂರಿನ ಶಾಂತಪುರ ವಾಸಿ ಕೃಷ್ಣಮೂರ್ತಿ ಅಲಿಯಾಸ್ ಮೀಸೆ ಕೃಷ್ಣ ಬಿನ್ ಹುಚ್ಚನಾಯ್ಕ (47) ಎಂಬಾತನು ಗ್ರಾಮ ಪಂಚಾಯಿತಿ ಎದುರುಗಡೆ ಇರುವ ಏರ್ ಟೆಲ್ ಟವರ್ ನ ಸುಮಾರು 150 ಅಡಿಗಳಷ್ಟು…