ರಿಪ್ಪನ್ ಪೇಟೆಯಲ್ಲಿ ‘ಗ್ರಾಮ ಒನ್’ ಕೇಂದ್ರಕ್ಕೆ ಚಾಲನೆ : ಒಂದೇ ಸೂರಿನಡಿ ಸಿಗಲಿದೆ 750 ಸರ್ಕಾರಿ ಸೇವೆಗಳು..!!
ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ‘ಗ್ರಾಮ ಒನ್’ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು,ಇದರ ಅಂಗವಾಗಿ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯಲ್ಲಿ ಸರ್ಕಾರಿ ಆಸ್ಪತ್ರೆಯ ಮುಂಭಾಗ ಗ್ರಾಮ ಒನ್ ಕೇಂದ್ರವನ್ನು ಗ್ರಾಪಂ ಅಧ್ಯಕ್ಷರಾದ ಮಂಜುಳಾ ಕೆ ರಾವ್ ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್…