ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ. ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…