ಗೃಹ ಸಚಿವರ ಸ್ವಕ್ಷೇತ್ರದ ಅರಳಸುರಳಿ ಗ್ರಾಮದಲ್ಲಿ ವೀಕೆಂಡ್ ಲಾಕ್ ಡೌನ್ ನಲ್ಲಿ ಅದ್ದೂರಿ ಜಾತ್ರ ಮಹೋತ್ಸವ :
ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ…