Headlines

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಓರ್ವ ಗಂಭೀರ|Accident

ತೀರ್ಥಹಳ್ಳಿ : ಪಟ್ಟಣದ ಸೀಬಿನಕೆರೆ ಸಮೀಪದ ಯಡೆಹಳ್ಳಿ ಕೆರೆ ಬಳಿ ಬೈಕ್ ಹಾಗೂ ಕೆ ಎಸ್ ಆರ್ ಟಿ ಸಿ ಬಸ್‌ಗೆ ನಡುವೆ ಭೀಕರ ಅಪಘಾತವಾದ ಘಟನೆ ನಡೆದಿದೆ. ಯಡೆಹಳ್ಳಿ ಕೆರೆ ಏರಿ ಮೇಲೆ ಬಸ್ ಬೈಕ್ ಗೆ  ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ಸಂಜೆ ನಡೆದಿದೆ.   ತೀರ್ಥಹಳ್ಳಿಯ ಮಾರ್ಕೆಟ್ ರಸ್ತೆಯ ಸಿರಾಜ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರಾಜ್ ಅವರು ತೀರ್ಥಹಳ್ಳಿ ಯಿಂದ ಯಡೆಹಳ್ಳಿ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯರ ಸೋದರನ ಪುತ್ರ ಶವವಾಗಿ ಪತ್ತೆ :|Honnali

ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿಯ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಶವ ಕೂಡ ಪತ್ತೆಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಬಿಳಿ ಬಣ್ಣದ ಕ್ರೇಟಾ ಕಾರು ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು…

Read More
Exit mobile version