ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara
ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…