ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್/guidelines

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯ ಗೈಡ್ ಲೈನ್ಸ್ ಹೇಗಿದೆ ? ಶಿವಮೊಗ್ಗ : ಡಿ. 31ರ ರಾತ್ರಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯು ಸ್ಪಷ್ಟ ಗೈಡ್ ಲೈನ್ಸ್ ನ್ನು ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಇಂದು ಜಿಲ್ಲಾ ರಕ್ಷಣಾಧಿಕಾರಿಗಳ ಕಛೆರಿಯಲ್ಲಿ ಹೊಸ ವರ್ಷಾಚರಣೆ ಸಂಬಂಧ ಸಂಬಂಧ ನಡೆದ ಹೋಟೆಲ್ ಗಳು, ಕ್ಲಬ್ ಗಳು ಮತ್ತು ರೆಸೋರ್ಟ್ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ವಿವಿಧ ನೀತಿ ನೀಯಮಗಳನ್ನು…

Read More

ವಿದ್ಯಾರ್ಥಿನಿಯರ ಮೇಲೆ ಟಿಪ್ಪರ್ ಲಾರಿ ಹರಿದ ಪ್ರಕರಣ -ಚಿಕಿತ್ಸೆ ಫಲಕಾರಿಯಾಗದೇ ಓರ್ವ ವಿದ್ಯಾರ್ಥಿನಿ ಸಾವು|Accident death

ಸಾಗರ ಟೌನ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಾಯಗೊಂಡಿದ್ದರು. ಈ ಪೈಕಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿತ್ತು. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿಯೇ ಆಕೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ವಿದ್ಯಾರ್ಥಿನಿಯನ್ನು ಶಿಕಾರಿಪುರ ಮೂಲದ ಪ್ರತಿಮಾ(19) ಎಂದು ಗುರುತಿಸಲಾಗಿದೆ. ಬಿಸಿಎಂ ಹಾಸ್ಟೆಲ್​ನ ವಿದ್ಯಾರ್ಥಿನಿಯರು ಶಿಕಾರಿಪುರ ಹಾಗೂ ಸೊರಬ ಮೂಲದವರು ಎನ್ನಲಾಗಿದ್ದು, ಬೆಳಗ್ಗೆ ಕಾಲೇಜಿಗೆ ಅಂತಾ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.  ಸಾಗರ…

Read More

ಭೀಕರ ಲಾರಿ ಅಪಘಾತ – ಮೂವರು ಹಾಸ್ಟೆಲ್ ವಿದ್ಯಾರ್ಥಿನಿಯರ ಮೇಲೆ ಹರಿದ ಲಾರಿ|Accident

ಕಾಲೇಜಿಗೆ ನಡೆದುಕೊಂಡು ಹೋಗುತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ಸಾಗರ ಟೌನ್ ನಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಸಮೀಪದ ಸಣ್ಣಮನೆ ಸೇತುವೆ ಬಳಿಯಲ್ಲಿ ಭೀಕರ ಆಪಘಾತವೊಂದು ಸಂಭವಿಸಿದೆ. ಜಲ್ಲಿ ತುಂಬಿದ್ದ ಲಾರಿಯೊಂದು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.   ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎನ್ನಲಾಗುತ್ತಿಗೆ, ಹಿಂದಿನಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದಾನೆ. ಆಗಷ್ಟೆ ಕಾಲೇಜಿಗೆ ಹೊರಟಿದ್ದ ಹಾಸ್ಟೆಲ್​ವೊಂದರ ವಿದ್ಯಾರ್ಥಿನಿಯರು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ಧಾರೆ.  ಮೂವರನ್ನು ಸಾಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ,…

Read More

ನಾಗರಹಳ್ಳಿ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ಸಂಪನ್ನ|nagarahalli

ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗರಹಳ್ಳಿ ಇತಿಹಾಸ ಪ್ರಸಿದ್ಧ ಶ್ರೀ ನಾಗೇಂದ್ರಸ್ವಾಮಿಯ ಕೂಳೆ ಪಂಚಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಈ ಜಾತ್ರಾ ಮಹೋತ್ಸವವು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತದೆ. ಮಳೆಗಾಲದಲ್ಲಿ ಶ್ರಾವಣ ಮಾಸದಲ್ಲಿ, ಬೇಸಿಗೆ ಕೂಳೆ ಪಂಚಮಿಯಲ್ಲಿ ವಿಶೇಷವಾಗಿ ಮಹೋತ್ಸವವು ನಡೆಯಲಿದೆ.  ಮದುವೆಗಾಗಿ, ಮಕ್ಕಳ ಫಲಕ್ಕೆ ಇಲ್ಲಿಗೆ ಆಗಮಿಸುವುದುಂಟು. ಮಂಗಳವಾರ ಮುಂಜಾನೆ ಪ್ರಧಾನ ಅರ್ಚಕ ಲಕ್ಷ್ಮಿನಾರಾಯಣಭಟ್‌ ನೇತೃತ್ವದಲ್ಲಿ ನಾಗೇಂದ್ರ ಸ್ವಾಮಿಗೆ ಅಭಿಷೇಕ, ಕ್ಷೀರಾಭಿಷೇಕ ಮತ್ತು ವಿಶೇಷ ಅಲಂಕಾರ ನಡೆಯಿತು. ದೇವರಿಗೆ ಮಹಾಮಂಗಳಾರತಿ ನೆರವೇರಿಸಿ,…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಮಳಲಿ ಮಠದ ಸೇತುವೆ ಬಳಿ ಬೈಕ್ ಅಪಘಾತ – ಶೆಟ್ಟಿಕೊಪ್ಪದ ಪ್ರದೀಪ್ ಸಾವು|Accident

ಮಳಲಿ‌ ಮಠದ ಸೇತುವೆ ಬಳಿ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಳಲಿ ಮಠದ ಸೇತುವೆ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಶೆಟ್ಟಿ ಕೊಪ್ಪದ ಪ್ರದೀಪ್ ಎಂಬುವರು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಚಲಿಸುತಿದ್ದ ಬೈಕ್ ಮಳಲಿ ಮಠದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಜರುಗಿದೆ ಎಂದು ಹೇಳಲಾಗುತ್ತಿದೆ. ಕೋಣಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಿಪ್ಪನ್‌ಪೇಟೆ : ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ|volleyball

ರಿಪ್ಪನ್‌ಪೇಟೆ : ಬೆಂಗಳೂರಿನಲ್ಲಿ ನಡೆದ 14 ವರ್ಷದ ಒಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಪಟ್ಟಣದ ಶಿವಮೊಗ್ಗ ರಸ್ತೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಪ್ರೀತಮ್ ಮತ್ತು ಗಣೇಶ್ ಕೆ ಎನ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಾಗಸಂದ್ರದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಭೀಮರಾಜ್ ಮತ್ತು ರೇಣುಕಾ ದಂಪತಿಗಳ…

Read More

ಪೊಲೀಸ್ ದಾಳಿ – ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ|Arrested

ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಗಾಂಜಾ, ನಗದು ಮತ್ತು ಮೊಬೈಲ್ ಫೋನುಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಗಾರ್ಡನ್ ಏರಿಯಾದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.  ಈ ವೇಳೆ ನಿಖಿಲ್ ಮತ್ತು ಭರತ್ ಎಂಬುವವರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು. ಅವರ ಬಳಿ ಇದ್ದ ಪ್ಲಾಸ್ಟಿಕ್ ಕವರ್ ನಲ್ಲಿ ಸುಮಾರು 450 ಗ್ರಾಂ ಗಾಂಜಾ ಪತ್ತೆಯಾಗಿದೆ. ಮಾರಾಟ ಮಾಡುವ…

Read More

ರೋಹಿತ್ ಚಕ್ರತೀರ್ಥ ಕುವೆಂಪು ಜನ್ಮಸ್ಥಳಕ್ಕೆ ಕಾಲಿಡಬಾರದು – ನೆಂಪೆ ದೇವರಾಜ್ : ಚಕ್ರತೀರ್ಥ ವಿರುದ್ದ ಪ್ರಗತಿಪರ ಚಿಂತಕರಿಂದ ಗೋಬ್ಯಾಕ್ ಅಭಿಯಾನ|go back rohith

ತೀರ್ಥಹಳ್ಳಿ : ರಾಷ್ಟ್ರ ಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಪಠ್ಯ ಪುಸ್ತಕ ವಿಚಾರದಲ್ಲಿ ಪ್ರತಿಭಟನೆಯಾಗುವಂತೆ ಮಾಡಿದ ಮತಾಂಧ ಅಂದರು ತಪ್ಪಿಲ್ಲ ಅಂತಹ ಕೆಲಸ ಮಾಡಿರುವ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದೊಂದು ಬಿಜೆಪಿ ಪ್ರಯೋಜಿತ ಕಾರ್ಯಕ್ರಮ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಉಪಾಧ್ಯಕ್ಷರಾದ ವೆಂಕಟೇಶ್ ಹೆಗ್ಡೆ ಹೇಳಿದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಡಿ.28 ಕ್ಕೆ ರೋಹಿತ್ ಚಕ್ರತೀರ್ಥ…

Read More

ವಿದೇಶದಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿಗೆ ಕೋವಿಡ್ ಪಾಸಿಟಿವ್|positive

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಹಲವು ತಿಂಗಳ‌ ನಂತರ ಪ್ರಥಮ ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಳೆದ 4 ದಿನಗಳ ಹಿಂದೆ ವಿದೇಶದಿಂದ ಬಂದ ವ್ಯಕ್ತಿಯಲ್ಲಿ‌ ಸೋಂಕು ಕಂಡುಬಂದಿದ್ದು, ಹೋಮ್​ ಐಸೋಲೇಷನ್​ಗೆ ಒಳಪಡಿಸಲಾಗಿದೆ. ಶಿವಮೊಗ್ಗ ಮೂಲದ ವ್ಯಕ್ತಿ ವಿದೇಶದಿಂದ ಬಂದಾಗ ಬೆಂಗಳೂರು ಏರ್​ಪೋರ್ಟ್​ನಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು. ಅವರು ಜಿಲ್ಲೆ ತಲುಪಿದ ನಂತರ ಪಾಸಿಟಿವ್ ಎಂದು ವರದಿ ಬಂದಿದ್ದು, ಸೋಂಕಿತನ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಉಳಿದಂತೆ ಜಿಲ್ಲೆಯಲ್ಲಿ 34 ಜನರನ್ನು ಪರೀಕ್ಷಿಸಿದಾಗ ಇಬ್ಬರಲ್ಲಿ ಸೋಂಕಿನ…

Read More