ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC
ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…