Headlines

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ : ವಿಜಯ | ಕಣ್ಮನ ಸೆಳೆದ ಸಿರಿಧಾನ್ಯಗಳ ಮನೆ |Ripponpet news

ರಿಪ್ಪನ್ ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ವಿಜಯ ಹೇಳಿದರು.   ಬಾಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  ಅಪೌಷ್ಠಿಕ ಮುಕ್ತತೆಯನ್ನು ಮನಗೊಂಡಿರುವ ಸರಕಾರ ಪೋಷಣ್ ಅಭಿಯಾನ ಯೋಜನೆಯ ಮೂಲಕ ಮಹಿಳೆಯರಿಗೆ…

Read More

ಸಂಘಟನೆಯಿಂದ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ : ವಾಸಪ್ಪ ಮಾಸ್ತಿ ಕಟ್ಟೆ | ರಿಪ್ಪನ್ ಪೇಟೆಯಲ್ಲಿ ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ರಿಪ್ಪನ್ ಪೇಟೆ :ಒಂದೇ ಕುಲ, ಒಂದೇ ಧರ್ಮ, ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಯಿಂದ ಬಲಯುತರಾಗಿ ಎಂಬ ಸಂದೇಶವನ್ನು ವಿಶ್ವಕ್ಕೆ ಸಾರಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣ ಗುರುಗಳ ಸಂದೇಶವನು ಪಾಲಿಸೋಣ, ಆಗ ಮಾತ್ರ ಸಮಾಜವನ್ನು ಕಟ್ಟಲು ಸಾಧ್ಯ,  ಎಂದು ಹೊಸನಗರ ತಾಲೂಕು ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಅಧ್ಯಕ್ಷ ಮಾಸ್ತಿಕಟ್ಟೆ ವಾಸಪ್ಪ ಹೇಳಿದರು.  ಪಟ್ಟಣದ ಆಶ್ರೀತಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಕೆರಹಳ್ಳಿ ಹೋಬಳಿ ಮಟ್ಟದ ಶ್ರೀ ನಾರಾಯಣ ಗುರು ವಿಚಾರಣ ವೇದಿಕೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ರಿಪ್ಪನ್ ಪೇಟೆ ರೋಟರಿ ಸಂಸ್ಥೆಯಿಂದ ಸಾಧಕರಿಗೆ ಸನ್ಮಾನ |Rotary

ರಿಪ್ಪನ್‌ಪೇಟೆ;-ಪಟ್ಟಣದ ಸಮಾಜ ಸೇವಕ ಹಾಗೂ ಕೊಡಗೈ ದಾನಿ ಹಾಸ್ಟಲ್ ಮಂಜಣ್ಣ ದಂಪತಿಗೆ ರಿಪ್ಪನ್‌ಪೇಟೆ ರೋಟರಿ ಸಂಸ್ಥೆಯವರು ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಸಮೀಪದ ಗವಟೂರು ನಿವಾಸಿಯಾದ ಹಾಸ್ಟಲ್ ಮಂಜಣ್ಣ ಮುವತ್ತು ವರ್ಷಗಳ ಕಾಲ ಸರ್ಕಾರಿ ವಿದ್ಯಾರ್ಥಿ ವಸತಿ ನಿಲಯದಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತ ಹೊಂದಿ ತನ್ನ ಸೇವಾವಧಿಯಲ್ಲಿ  ಉಳಿತಾಯ ಮಾಡಿದ ೬ ಲಕ್ಷ ಕ್ಕೂ ಅಧಿಕ ಮೊತ್ತದ ಹಣವನ್ನು “ಮುಕ್ತಿವಾಹಿನಿ’’ವಾಹನಕ್ಕೆ ವಿನಿಯೋಗಿಸಿ  ಸಾರ್ವಜನಿಕರ ಸೇವೆಗಾಗಿ ರೋಟರಿ ಸಂಸ್ಥೆಯವರ ಮೂಲಕ ಲೋಕಾರ್ಪಣೆ ಮಾಡುವುದರೊಂದಿ ಎಲೆಮರೆಯ ಕಾಯಿಯಂತೆ ಎಡಗೈಗೆ ಕೊಟ್ಟಿರುವುದು ಬಲಗೈಗೆ…

Read More

ರಿಪ್ಪನ್‌ಪೇಟೆ : ಪಾದಚಾರಿಗೆ ಬೈಕ್ ಡಿಕ್ಕಿ – ಗಂಭೀರ ಗಾಯಗೊಂಡ ಪಾದಚಾರಿ ಮೆಗ್ಗಾನ್ ಗೆ ದಾಖಲು |Accident

ರಿಪ್ಪನ್‌ಪೇಟೆ : ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ಪಟ್ಟಣದ ವಿನಾಯಕನಗರದ ಬಾಲಕಿಯರ ಹಾಸ್ಟೆಲ್ ಮುಂಭಾಗದಲ್ಲಿ ನಡೆದಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್ (34) ಗಂಭೀರ ಗಾಯಗೊಂಡಿದ್ದಾರೆ. ವಿನಾಯಕನಗರದಿಂದ ರಿಪ್ಪನ್‌ಪೇಟೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ರಿಪ್ಪನ್‌ಪೇಟೆ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎಡಗಾಲು ಮುರಿದಿದ್ದು ,ತಲೆ ಹಾಗೂ ಎಡಪಕ್ಕೆಗೆ ತೀವ್ರತರವಾದ ಪೆಟ್ಟಾಗಿದ್ದು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ರಾಮನಗರ ನಿವಾಸಿ ಸೈಯದ್ ಮುಜಾಹಿದ್…

Read More

ಶಿರಾಳಕೊಪ್ಪದಲ್ಲಿ ಭೂಕಂಪನ ಸಂಭವಿಸಿಲ್ಲ : KSNDMC ಸ್ಪಷ್ಟನೆ |ಸುಳ್ಳು ಸುದ್ದಿಗೆ ಭಯಬೀತರಾದ ಜನ

ಇಂದು ಮಧ್ಯಾಹ್ನ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಭೂಕಂಪನದ ( Earthquake ) ಅನುಭವ ಉಂಟಾಗಿದೆ ಎನ್ನಲಾಗಿತ್ತು. ಆದ್ರೇ ಭೂ ಕಂಪನ ಸಂಭವಿಸಿಲ್ಲ ಎಂಬುದಾಗಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು(KSNDMC) ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕೆ ಎಸ್ ಎನ್ ಡಿ ಎಂ ಸಿ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಶಿವಮೊಗ್ಗದ ಲಿಂಗನಮಕ್ಕಿ ಅಣೆಕಟ್ಟು, ಹಾಸನ ಜಿಲ್ಲೆಯ ಹೇಮಾಪತಿ ಅಣೆಕಟ್ಟು, ಉತ್ತರ ಕನ್ನಡ ಜಿಲ್ಲೆಯ ಸೂಪಾ ಅಣೆಕಟ್ಟು, ಮೈಸೂರು ಜಿಲ್ಲೆಯ ಕೆ ಆರ್ ಎಸ್…

Read More

ಮರವೇರಿ ಕುಳಿತಿದ್ದ ಹೆಬ್ಬಾವು – ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟ ಉರಗತಜ್ಞ | Python

ಮರವೇರಿದ್ದ ಹೆಬ್ಬಾವನ್ನು ಸೆರೆ ಹಿಡಿದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಘಟನೆ ಸೊರಬ ತಾಲೂಕಿನ ಜೇಡಗೇರಿ ಸಮೀಪದಲ್ಲಿ ನಡೆದಿದೆ. ಜೇಡಗೇರಿ-ಚೀಲನೂರು ಸಮೀಪದ ಜೋಳದ ಹೊಲದಲ್ಲಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕೆಲ ನಿಮಿಷಗಳಲ್ಲೇ ಮರವನ್ನೇರಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಟ್ಟಣದ ಮಾರ್ಕೆಟ್ ರಸ್ತೆಯ ಸ್ನೇಕ್ ಅಯಾಝ್ ಮರವನ್ನೇರಿದ್ದ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿ, ಹೆಬ್ಬಾವನ್ನು ವೀಕ್ಷಿಸಿದರು. ಉಪವಲಯ ಅರಣ್ಯಾಧಿಕಾರಿ ಪರಶುರಾಮ್ ಅವರ ಸಮ್ಮುಖದಲ್ಲಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Read More

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ |Yellow alert

ರಾಜ್ಯದ ಶಿವಮೊಗ್ಗ , ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ,ಮತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಳಲ್ಲಿ ಭಾರೀ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಲಿದೆ ಎಂದು ಐಎಂಡಿ ಹೇಳಿದೆ.  ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿಯೂ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕೇಂದ್ರ ಭಾಗದಲ್ಲಿರುವ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್…

Read More
Exit mobile version