ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ
ಸೂಡೂರು : ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…