ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ
ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…


