ಪುತ್ರ ವಿಜಯೇಂದ್ರರಿಗೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ ಬಿಟ್ಟುಕೊಟ್ಟ ಬಿ ಎಸ್ ಯಡಿಯೂರಪ್ಪ :
ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವುದಿಲ್ಲ. ತಮ್ಮ ಬದಲು ಪುತ್ರ ವಿಜಯೇಂದ್ರ ಅವರು ಚುನಾವಣಗೆ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಬದಲು ವಿಜಯೇಂದ್ರ ಅವರು ಶಿಕಾರಿಪುರದಿಂದ ಸ್ಪರ್ಧೆ ಮಾಡಲಿದ್ದಾರೆ. ವಿಜಯೇಂದ್ರ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಿ ಕಳುಹಿಸಬೇಕು ಎಂದು ಇಲ್ಲಿನ ಮತದಾರರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದರು. ಹಳೆ ಮೈಸೂರು ಭಾಗದಲ್ಲಿಯೂ ವಿಜಯೇಂದ್ರ…