ಕಾಂಗ್ರೆಸ್ ಮುಖಂಡ ಅರಸಾಳಿನ ಪಿಯೂಸ್ ಡಿಸೋಜ ಇನ್ನಿಲ್ಲ …
ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮ ಪಂಚಾಯತಿ ಮಾಜಿ ಪ್ರಧಾನರು ಹಾಗೂ ಕಾಂಗ್ರೆಸ್ ಮುಖಂಡರಾದ ಪಿಯೂಸ್ ಡಿಸೋಜ ರವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತಿದ್ದ ಅವರನ್ನು ಎರಡು ದಿನಗಳ ಹಿಂದೆ ಚಿಕ್ಕಮಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನೆ ರಾತ್ರಿ 10.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅರಸಾಳು ಗ್ರಾಮ ಪಂಚಾಯತಿಯ ಮಾಜಿ ಪ್ರಧಾನರಾಗಿದ್ದ ಅವರು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡರಾಗಿದ್ದರು.ರಾಜಕಾರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಬಂಗಾರಪ್ಪ, ಕಾಗೋಡು ತಿಮ್ಮಪ್ಪ…


