Headlines

ಪ್ರೀತಿಸಿದ ಯುವಕನ ಜೊತೆ ಮದುವೆಗೆ ಅಡ್ಡಿಯಾಯಿತು ಕುಜ ದೋಷ : ವಿಷ ಸೇವಿಸಿದ್ದ ಮಹಿಳಾ ಪೊಲೀಸ್ ಸಾವು

ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್‌ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ…

Read More

ಗರ್ತಿಕೆರೆಯ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಚಿನ್ನದ ಪದಕ…

ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದ ಮಹಮ್ಮದ್ ಆದಿಲ್ ರವರಿಗೆ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ವಿಭಾಗದಲ್ಲಿ ಚಿನ್ನದ ಪದಕ ಪ್ರಶಸ್ತಿ ಲಭಿಸಿದ್ದು ಗುರುವಾರ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾನಿಲಯದಲ್ಲಿ ಪ್ರಶಸ್ತಿ ನೀಡಲಾಯಿತು. ಎರಡು ವರ್ಷಗಳ ಹಿಂದೆ ನಡೆಯಬೇಕಾಗಿದ್ದ ಪ್ರಶಸ್ತಿ ಸಮಾರಂಭ ಕೋವಿಡ್ 19 ಪ್ರಯುಕ್ತ ಮುಂದೂಡಲಾಗಿದ್ದು 32 ನೇ ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಮಹಮ್ಮದ್ ಆದಿಲ್ ರವರಿಗೆ ಸ್ವರ್ಣ ಪದಕ ನೀಡಿ ಗೌರವಿಸಲಾಯಿತು. ಮಹಮ್ಮದ್ ಆದಿಲ್ ಗರ್ತಿಕೆರೆಯ ಅಬ್ದುಲ್ ಅಜೀಜ್ ಹಾಗೂ ನಾಜಿಯಾ ಬೇಗಂ ದಂಪತಿಗಳ ಪುತ್ರನಾಗಿದ್ದು ಇವರು…

Read More

ಗ್ರಾಮ ಪಂಚಾಯತ್ ಅಧ್ಯಕ್ಷಗಾದಿ ಕೈ ತಪ್ಪಿದ್ದಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ :

ಅಧ್ಯಕ್ಷಗಾದಿ ದೊರಕಲಿಲ್ಲವೆಂದು ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ(ದರಮಘಟ್ಟ) ಪೊಲೀಸ್ ಬಂದೋಬಸ್ತ್ ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ನಡೆದಿದ್ದು ಡ್ರಾಮಾ ಹೈಡ್ರಾಮಕ್ಕೆ ಎಡೆ‌ಮಾಡಿಕೊಟ್ಟಿದೆ. ಖಲೀಮ್ ಎಂಬುವರು ಇಂದು ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ಆಯ್ಕೆ ಆಗುವುದು ಅದರಂತೆ ಉಪಾಧ್ಯಕ್ಷರಾಗಿ ಮಾಲಮ್ಮ ಎಂಬುವರು ಆಯ್ಕೆಯಾಗುವುದು ಬಹತೇಕ ಖಚಿತವಾಗಿದೆ. ಈ ಹಿನ್ನಲೆಯಲ್ಲಿ ಕೌಸರ್ ಭಾನು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಆಯ್ಕೆಗೂ ಮೊದಲು ಕೌಸರ್ ಭಾನು ಎಂಬ…

Read More

ರಿಪ್ಪನ್‌ಪೇಟೆ ಆರೋಗ್ಯ ಕೇಂದ್ರದಲ್ಲಿ 108 ಆಂಬುಲೆನ್ಸ್ ಸೌಲಭ್ಯವಿಲ್ಲದೆ ನರಳಾಡಿದ ಅಪಘಾತಗೊಂಡ ಗಾಯಾಳುಗಳು :

ಹೊಸನಗರ ತಾಲೂಕಿನ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆಯನ್ನು ಹೊಂದಿರುವ  ರಿಪ್ಪನ್ ಪೇಟೆ ಪಟ್ಟಣದ ಆರೋಗ್ಯ ಕೇಂದ್ರದಲ್ಲಿ  108 ಆಂಬುಲೆನ್ಸ್ ಸೌಲಭ್ಯವಿಲ್ಲದೆ  ಕಳೆದ ಮೂರು ತಿಂಗಳುಗಳಾಗಿವೆ.  ಈ ಬಗ್ಗೆ ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಸಂಬಂಧ  ಪಟ್ಟ ಹಿರಿಯ ಅಧಿಕಾರಿಗಳಿಗೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಹಲವಾರು ಬಾರಿ ಸಾರ್ವಜನಿಕರು ಮನವಿ ಸಲ್ಲಿಸಿದರೂ ಸಹ ಯಾವುದೇ ರೀತಿಯ ಸ್ಪಂದನೆಯನ್ನು ನೀಡಿರಲಿಲ್ಲ. ರಸ್ತೆ ಅಪಘಾತದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಿಂದ ತಂದೆ ಸ್ಥಳದಲ್ಲೇ ಮೃತಪಟ್ಟರೆ ಬದುಕುಳಿದ ಮಗನಿಗೆ…

Read More

ರಂಜದಕಟ್ಟೆಯಲ್ಲಿ ಮೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ !?

ತೀರ್ಥಹಳ್ಳಿ: ತಾಲೂಕಿನ ಮುಳುಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರಂಜದಕಟ್ಟೆಯ ಭೀಮನ ಕಟ್ಟೆ ತೂಗು ಸೇತುವೆಯ ಬಳಿ ವಿದ್ಯುತ್ ತಂತಿಯೊಂದು ನೆಲದ ಮೇಲೆ ಬಿದ್ದಿದ್ದನ್ನು ಗಮನಿಸದೆ ರೈತ ಮಹಿಳೆಯೊಬ್ಬರು ಜಾನುವಾರಿಗೆ ಹುಲ್ಲು ತರುವಾಗ ವಿದ್ಯುತ್ ಶಾಕ್ ತಗುಲಿ ಮೃತರಾಗಿರುವ ಘಟನೆ ಜರುಗಿದೆ. ಕೆಲವು ಕಡೆ ವಿದ್ಯುತ್ ಕಂಬಗಳಲ್ಲಿ ತಂತಿ ಕೆಳಗೆ ಜೋತು ಬಿದ್ದಿರುತ್ತವೆ ಅದನ್ನು ಗಮನಿಸದೆ ಅಥವಾ ಶಾರ್ಟ್ ಸರ್ಕ್ಯೂಟ್ ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಇದ್ದು ಈಗಾಗಲೇ ಮಳೆಗಾಲ ಪ್ರಾರಂಭವಾಗುತ್ತಿದ್ದು ಕೆಲವು ತಂತಿಗಳು ತುಕ್ಕು ಹಿಡಿಯುವ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ ಭೀಕರ ಬೈಕ್ ಅಪಘಾತ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ : ಸಮೀಪದ ಗವಟೂರು ಕೆರೆ ಬಳಿ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ರಿಪ್ಪನ್ ಪೇಟೆ ಕಡೆಗೆ ಬರುತ್ತಿದ್ದ (KA 15 W 3356) ಟಿವಿಎಸ್ ಬೈಕ್ ಹಾಗೂ ರಿಪ್ಪನ್ ಪೇಟೆಯಿಂದ ಹೊಸನಗರ ಕಡೆಗೆ ತೆರಳುತ್ತಿದ್ದ ಟಿವಿಎಸ್ ಬೈಕ್(KA 15 ED 5303) ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ವ್ಯಕ್ತಿಯೊಬ್ಬ  ಮೃತಪಟ್ಟಿದ್ದಾನೆ.ಇನ್ನೊರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗ ಆಸ್ಪತ್ರೆಗೆ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

ದೇವಸ್ಥಾನ ಹುಂಡಿಗೆ ಕನ್ನ ಹಾಕಿದ ಇಬ್ಬರು ಖದೀಮರ ಬಂಧನ : ಹತ್ತು ಲಕ್ಷ ಮೌಲ್ಯದ ಚಿನ್ನಾಭರಣ ವಶ

ಭದ್ರಾವತಿ : ಕುಮರಿ ನಾರಾಯಣಪುರ ಗ್ರಾಮದ ಚೌಡಮ್ಮ ದೇವಸ್ಥಾನದ‌ ಹುಂಡಿಗೆ ಕನ್ನ ಹಾಕಿದ ಇಬ್ಬರನ್ನು ಸೋಮವಾರ ಬಂಧಿಸಲಾಗಿದೆ. ಭದ್ರಾವತಿಯ ಹೊಸಮನೆ ನಿವಾಸಿ ವಸಂತರಾಜು ಅಲಿಯಾಸ್ ವಸಂತ(37), ಬೇಡರ ಹೊಸಳ್ಳಿಯ ಶ್ವೇತಾ ಅಲಿಯಾಸ್ ಆಸ್ಮಾ(32) ಬಂಧಿತರು. ಚೌಡಮ್ಮ ದೇವಸ್ಥಾನದ ಬಾಗಿಲಿನ ಬೀಗವನ್ನು ಮುರಿದು ಒಳಗಡೆ ಇದ್ದ ಕಾಣಿಕೆ ಹುಂಡಿಯನ್ನು ಒಡೆದು ಅದರಲ್ಲಿದ್ದ ಅಂದಾಜು ₹20,000 ರಿಂದ ₹30,000 ನಗದು ಹಣವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಪಿಐ ನೇತೃತ್ವದ ‌ತಂಡ ಕಾರ್ಯಾಚರಣೆ ‌ಕೈಗೊಂಡು…

Read More

ಪದವಿ ತರಗತಿಯಲ್ಲಿ ರ‍್ಯಾಂಕ್ ಪಡೆದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರಿಗೆ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ಸನ್ಮಾನ :

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಗ್ರಾಮದ ಇಬ್ಬರು ವಿದ್ಯಾರ್ಥಿನಿಯರು ಈ ಬಾರಿಯ ಕುವೆಂಪು ವಿಶ್ವವಿದ್ಯಾನಿಲಯ ನಡೆಸಿದ  ಪದವಿ ಪರೀಕ್ಷೆಯಲ್ಲಿ ಅಂತಿಮ ವರ್ಷದ ಕಲಾ ವಿಭಾಗದಲ್ಲಿ ರ‍್ಯಾಂಕ್ ಗಳಿಸಿ ಅದ್ಭುತ ಸಾಧನೆಯನ್ನು ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವತಿಯಿಂದ ರಿಪ್ಪನ್‌ಪೇಟೆ ಪದವಿ‌ ಕಾಲೇಜಿಗೆ ಎರಡು ರ‍್ಯಾಂಕ್ ತಂದುಕೊಟ್ಟಂತಹ ಕಾವ್ಯ ಸಿ ಹಾಗೂ ಸಿಂಧು ಜೆ ರವರಿಗೆ ಕೂರಂಬಳ್ಳಿ ಗ್ರಾಮದ ಕಾವ್ಯ ಸಿ ರವರ ಸ್ವಗೃಹದಲ್ಲಿ ಇಬ್ಬರು…

Read More