ಸ್ವಯಂ ಪ್ರೇರಿತ ವೇಶ್ಯಾವಾಟಿಕೆ ಕಾನೂನು ಬಾಹಿರವಲ್ಲ – ಸುಪ್ರೀಂಕೋರ್ಟ್
ವೇಶ್ಯಾವಾಟಿಕೆ ಎನ್ನುವುದು ಒಂದು ವೃತ್ತಿಯಾಗಿದೆ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನ ಅಡಿಯಲ್ಲಿ ಘನತೆ ಹಾಗೂ ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಈ ತೀರ್ಪು ನೀಡಿದ್ದು, ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ರಕ್ಷಿಸಲು ನಿರ್ದೇಶನಗಳನ್ನು ಕೂಡ ಇದೇ ವೇಳೆ ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ವಯಸ್ಕರಾಗಿದ್ದು, ಒಪ್ಪಿಗೆಯೊಂದಿಗೆ…