ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?
ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…


