Headlines

ಶಿವಮೊಗ್ಗ ನಗರದಲ್ಲಿ ರೆಡ್ ಅಲರ್ಟ್ ಘೋಷಣೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದಲ್ಲಿ ಅಧಿಕ ಮಳೆ ಹಿನ್ನಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಿರೀಕ್ಷೆಯಂತೆ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗ ತಾಲ್ಲೂಕಿನಾದ್ಯಂತ ಅತಿಯಾದ ಮಳೆ ಸುರಿಯುತ್ತಿರುವ ಕಾರಣ ತಾಲ್ಲೂಕಿನ ಎಲ್ಲ ಶಾಲೆಗಳಿಗೆ ಅಪರ ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಈ ದಿನ ಅಂದರೆ ಮೇ.19ರಂದು ರಜೆ ಘೋಷಿಸಿದೆ. ಹವಮಾನದ ವೈಪರಿತ್ಯ ಹಾಗೂ ಅಧಿಕ ಮಳೆಯ ಹಿನ್ನಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.ನಗರದ ಮತ್ತು ತಾಲೂಕಿನಲ್ಲಿರುವ  ಖಾಸಗಿ, ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರದ ಶಾಲೆಗಳಿಗೆ  ಸಧ್ಯಕ್ಕೆ ಒಂದು…

Read More

ಜಿಲ್ಲಾಧಿಕಾರಿಗಳ ಭೇಟಿಯಿಂದ ಬೆಳ್ಳೂರು ಗ್ರಾಮದ ಜನರ ಸಂಕಷ್ಟ ದೂರವಾದಿತೆ…….!? ಇದೇ ತಿಂಗಳ 21 ರಂದು ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ.

ಗ್ರಾಮಗಳ ಜೀರ್ಣೋದ್ಧಾರಕ್ಕಾಗಿ ಪ್ರತಿ ವರ್ಷ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋಟ್ಯಾಂತರ ರೂಪಾಯಿಗಳು ಬಿಡುಗಡೆ ಮಾಡಿ ಸಾಕಷ್ಟು ಯೋಜನೆಗಳನ್ನು ರೂಪಿಸುತ್ತಿದೆ. ಆದರೆ ಇಲ್ಲೊಂದು ಗ್ರಾಮ ಸುಮಾರು 70 ವರ್ಷಗಳಿಂದ ಮೂಲ ಸೌಕರ್ಯಗಳಿಲ್ಲದೆ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದೆ. ಇಷ್ಟೆಲ್ಲಾ ಸಂಕಷ್ಟ ಅನುಭವಿಸುತ್ತಿರುವ ಈ ಕುಗ್ರಾಮದ ಜನರ ಅಳಲನ್ನು ಯಾರು ಕೇಳವರೇ ಇಲ್ಲ. ಅಷ್ಟಕ್ಕೂ ಈ ಗ್ರಾಮ ಇರುವದಾದ್ರು ಎಲ್ಲಿ? ಇಲ್ಲಿಯ ಜನರ ಪರಿಸ್ಥಿತಿ ಆದ್ರೂ ಹೇಗಿದೆ ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ… ಹೌದು, ನಾವಿಲ್ಲಿ ಹೇಳಲು ಹೊರಟಿರುವುದು…

Read More

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.  ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್…

Read More

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More

ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…

Read More