Headlines

ಅಂಗನವಾಡಿ ಕಾರ್ಯಕರ್ತೆರಿಗೆ ಮತ್ತು ಸಹಾಯಕಿಯರಿಗೆ ಮನೆ ಮತ್ತು ಬಿಪಿಎಲ್ ಕಾರ್ಡ್ ಕಡ್ಡಾಯ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುವುದು : ಹರತಾಳು ಹಾಲಪ್ಪ|Ripponpet

ರಿಪ್ಪನ್‌ಪೇಟೆ : ಜಗತ್ತನ್ನು ವ್ಯಾಪಿಸಿದ್ದ ಕೊರೋನಾ ಮಹಾಮಾರಿ ರೋಗದ ಸಂದರ್ಭದಲ್ಲಿ ಅಂಗನವಾಡಿ ಆಶಾ ಮತ್ತು ಅರೋಗ್ಯ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಶ್ರಮಿಸಿರುವುದು ಪ್ರಸಂಶನೀಯವಾಗಿದೆ ಅದರೆ ಅವರಿಗೆ ಕನಿಷ್ಟ ವೇತನವಿಲ್ಲದೆ ಪರದಾಡುವ ಸ್ಥಿತಿ ಇದ್ದರೂ ಕರ್ತವ್ಯವನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ ಇವರಿಗೆ ಇದೇ 19 ರಿಂದ ಅರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಗಮನಸೆಳೆಯುವುದರೊಂದಿಗೆ ಪರಿಹಾರ ಕಲ್ಪಿಸುವ ಭರವಸೆಯನ್ನು ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆಯ ಜ್ಯೋತಿಮಾಂಗಲ್ಯ…

Read More

ತೀರ್ಥಹಳ್ಳಿಯಲ್ಲಿ ಸಿನಿಹಬ್ಬ ಕಿರುಚಿತ್ರೋತ್ಸವ ಯಶಸ್ವಿ – ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ನಿರ್ದೇಶನದ ಕಿರುಚಿತ್ರ ಪ್ರದರ್ಶನ|Short films

ತೀರ್ಥಹಳ್ಳಿ : ಡಿಸೆಂಬರ್ 15 ರಂದು ತೀರ್ಥಹಳ್ಳಿ “ಸಿನಿ ಹಬ್ಬ” ಕಿರು ಚಿತ್ರೋತ್ಸವ  ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮವನ್ನು ತೀರ್ಥಹಳ್ಳಿಯ ಕುರ್ಕುರೆ ಕ್ರಿಯೇಷನ್ಸ್ ತಂಡ ಆಯೋಜಿಸಿದ್ದು , ಶಿವಮೊಗ್ಗ ಸಿನಿಮಾಸ್ ಅಡ್ಡ ಹಾಗೂ ಸತ್ಯ ಪಿಚ್ಚರ್ಸ್ ಅವರು ಭಾಗಿಯಾಗಿದ್ದರು, ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ಮೂಲದ ಯುವ ನಿರ್ದೇಶಕ ಜಿಲ್ಸನ್ ಜೊಸೇಫ್ ನಿರ್ದೇಶನದ ಸಂಭಾಷಣೆ ಇಲ್ಲದ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತಹ ಕಿರುಚಿತ್ರ “ಎಕ್ಸಿಬಿಷನಿಸಂ ” ಸೇರಿದಂತೆ 6 ಕಿರು ಚಿತ್ರಗಳ ಪ್ರದರ್ಶನವನ್ನು ಮಾಡಲಾಗಿತ್ತು.   ರಾಮಾ ರಾಮಾ ರೇ…

Read More

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಅರ್ ಎ ಚಾಬುಸಾಬ್ ನೇಮಕ|jds

ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿ ಆರ್. ಎ. ಚಾಬುಸಾಬ್ ಅವರನ್ನು ನೇಮಿಸಿ ಇಂದಿನಿಂದಲೇ ಕಾರ್ಯಪ್ರವೃತ್ತರಾಗಿ ಪಕ್ಷ ಸಂಘಟನೆಗೆ ಅಣಿಯಾಗುವಂತೆ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆದೇಶ ನೀಡಿದ್ದಾರೆ. ಸುಮಾರು 30 ವರ್ಷಗಳಿಗೂ ಹೆಚ್ಚು ಕಾಲ ಜೆಡಿಎಸ್ ಪಕ್ಷದ ಕಟ್ಟಾಳಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿರುವ ಚಾಬುಸಾಬ್ ಅವರು ಎರಡನೇ ಬಾರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುತ್ತಿದ್ದಾರೆ. ಮೊದಲಿಗೆ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅಸ್ತಿತ್ವವೇ ಇಲ್ಲದೇ ಇರುವಾಗ ಪಕ್ಷ…

Read More

ಹೊಳೆಯಲ್ಲಿ ದನಗಳ ಮೈ ತೊಳೆಸಲು ಹೋದ ಯುವಕ ಕಾಲು ಜಾರಿ ಬಿದ್ದು ಸಾವು|mutuguppe

ದನಗಳ ಮೈ ತೊಳೆಸಲು ಹೋದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಮುಟುಗುಪ್ಪೆ ಸಮೀಪದ ಬಂದಿಗೆ  ಗ್ರಾಮದ ಹೊಳೆಯಲ್ಲಿ ದನಗಳಿಗೆ ಮೈ ತೊಳೆಸಲು ಹೋಗಿ ಆಕಸ್ಮಿಕವಾಗಿ ಯುವಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ. ಬಂದಿಗೆ ಗ್ರಾಮದ ಪುನೀತ್ ಕುಮಾರ್ (23) ಮೃತ ದುರ್ಧೈವಿ. ಇಂದು ಬೆಳಗ್ಗೆ ದನಗಳಿಗೆ ಮೈ ತೊಳಿಸಲು ತಮ್ಮ ಜಮೀನಿನ ಹತ್ತಿರವಿರುವ ಜಮೀನಿನ ಹೊಳೆಗೆ ಹೋಗಿದ್ದಾರೆ.ಆದರೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ತಕ್ಷಣ ಅಗ್ನಿಶಾಮಕ ದಳದವರು ತಳಕ್ಕೆ…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…

Read More

ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…

Read More

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ – 18 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು|Accident

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ತುಮರಿ ಬಳಿ ಶಾಲಾ ಪ್ರವಾಸಿ ಬಸ್ಸು ಪಲ್ಟಿಯಾಗಿದ್ದೂ, ಕೆಲ ಶಾಲಾ ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ  ಅಂದಾಜು 18 ಜನ ಮಕ್ಕಳು ಹಾಗೂ ಎಂಟು ಜನ ಶಿಕ್ಷಕರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆ ತರಲಾಗಿದೆ.  ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪ್ರೌಢ ಶಾಲಾ ಮಕ್ಕಳು ಪ್ರವಾಸಕ್ಕೆ ಬಂದ ಸಂಧರ್ಭದಲ್ಲಿ ಘಟನೆ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More