ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…