Headlines

KSRTC ಬಸ್ ನಲ್ಲಿ ಶಿವಮೊಗ್ಗಕ್ಕೆ ಸಾಗಿಸುತಿದ್ದ ₹1.27000 ಮೌಲ್ಯದ ಗೋವಾ ಮದ್ಯ ವಶ : ಇಬ್ಬರ ಬಂಧನ

ಸಾಗರ-ಪಣಜಿ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಅಕ್ರಮವಾಗಿ  ಗೋವಾ ಮದ್ಯ ಸಾಗಿಸುತಿದ್ದ ಇಬ್ಬರನ್ನು ವಶಕ್ಕೆ ಪಡೆದು ₹ 1.27000 ಸಾವಿರ ಮೌಲ್ಯದ ವಿವಿಧ ಬ್ರಾಂಡ್ ನ  ಗೋವಾ ಮದ್ಯ ವನ್ನು ಅಬಕಾರಿ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡ ಘಟನೆ ಕಾರವಾರ ತಾಲೂಕಿನ ಮಾಜಾಳಿಯ ಚಕ್ ಪೋಸ್ಟ್ ನಲ್ಲಿ ನಡೆದಿದೆ.  ಶಿವಮೊಗ್ಗ ಮೂಲದ ನಾಗರಾಜ (35), ಸಾಗರ್ (25) ಬಂಧಿತರಾಗಿದ್ದು ,ಗೋವಾದಿಂದ ಶಿವಮೊಗ್ಗ ಕ್ಕೆ ಬ್ಯಾಗ್ ನಲ್ಲಿ ವಿವಿಧ ಬ್ರಾಂಡ್ ನ ಮದ್ಯವನ್ನು ತುಂಬಿಕೊಂಡು ಬಸ್…

Read More

ಆಯನೂರು ಬಳಿ ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಆಯನೂರು ಬಳಿ ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಭೀಕರ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಧಾರುಣ ಸಾವುಕಂಡಿದ್ದಾನೆ. ಆಯನೂರು ಸಮೀಪದ ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿಯಾಗಿದ್ದಾನೆ. ಶಿವಮೊಗ್ಗದ ಆಯನೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆ ಇದಾಗಿದೆ. ಶಿವಮೊಗ್ಗದಿಂದ ಆಯನೂರಿನ ಕಡೆ ಬೈಕ್ ನಲ್ಲಿ ತೆರಳುತ್ತಿದ್ದ ಆಕಾಶ್ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪದ ಬಳಿ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಪರಿಣಾಮ ಆಕಾಶ್ ಸ್ಥಳದಲ್ಲಿಯೇ ಸಾವುಕಂಡಿದ್ದಾನೆ. ಅಪಘಾತದ ರಭಸಕ್ಕೆ ಆಕಾಶ್…

Read More

ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲೇ ಸಾವು

  ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ಉಳವಿ ಮತ್ತು ಮಳಲಗದ್ದೆ ಗ್ರಾಮದ ನಡುವೆ ಗುರುವಾರ ರಾತ್ರಿ ಸಂಭವಿಸಿದೆ. ಅವಲಗೋಡು ಗ್ರಾಮದ ಯುವರಾಜ್ ಗಣಪತಿ (38) ಮೃತ ಬೈಕ್ ಸವಾರ. ಉಳುವಿಯಿಂದ ಅವಲಗೋಡು ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಗೆ ಸೊರಬದಿಂದ ಸಾಗರ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಬೈಕಿಗೆ ಡಿಕ್ಕಿ ಹೊಡೆದ  ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ…

Read More

ರಂಗಭೂಮಿ ಚಟುವಟಿಕೆಗಳಿಂದ ಪ್ರತಿಭೆಗಳು ಇನ್ನೂ ಜೀವಂತವಾಗಿದೆ : ಮೂಲೆಗದ್ದೇ ಶ್ರೀಗಳು

ಮಕ್ಕಳಲ್ಲಿ ಹುದುಗಿರುವ 64 ವಿದ್ಯೆಗಳನ್ನು ಹೊರತೆಗೆಯುವ ಕೆಲಸ ಹಳ್ಳಿ ಮಕ್ಕಳ ರಂಗ ಹಬ್ಬದಂತಹ ಶಿಬಿರಗಳಿಂದ ಮಾತ್ರ ಸಾಧ್ಯ ಎಂದು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಗುರುವಾರ ರಿಪ್ಪನ್ ಪೇಟೆಯ ಮಸರೂರು ದಿ. ಎಂ.ಕೆ .ರೇಣುಕಪ್ಪ ಗೌಡ ಪ್ರತಿಷ್ಠಾನ ಹಾಗೂ ಮಲೆನಾಡ ಕಲಾತಂಡದವರು ಏರ್ಪಡಿಸಿದ್ದ ಹಳ್ಳಿ ಮಕ್ಕಳ ರಂಗ ಹಬ್ಬದ ಶಿಬಿರದ ನೈತಿಕ ಶಿಕ್ಷಣ ಹಿನ್ನೆಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವಚನ ನೀಡಿ ಮಾತನಾಡಿದರು. ಶ್ರದ್ಧೆ , ನಂಬಿಕೆ, ಪ್ರೀತಿ, ನಾನು, ನನ್ನದು, ಇವು 5…

Read More

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :

ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…

Read More

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಚಾನೆಲ್ ಗೆ ಹಾರಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ : ಮುಗಿಲು‌ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ ಅನೀದ್ (22) ಮೃತಪಟ್ಟ ಧುರ್ಧೈವಿಯಾಗಿದ್ದಾನೆ. ಕಳೆದ 48 ಗಂಟೆಗಳಿಂದ ಅಗ್ನಿಶಾಮಕ ದಳ ದವರು ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕನ ಶವ ಪತ್ತೆಯಾಗಿರಲಿಲ್ಲ,ಇಂದು ಬೆಳಿಗ್ಗೆ ನೆಲ್ಲೂರು ಸಮೀಪದ ಹಿರೆಮಳಲಿ ಎಂಬ ಗ್ರಾಮದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ….

Read More

ಇನ್ನೂ ಪತ್ತೆಯಾಗದ ವೃದ್ದನನ್ನು ರಕ್ಷಿಸಲು ಚಾನೆಲ್ ಗೆ ಹಾರಿ ನಾಪತ್ತೆಯಾಗಿದ್ದ ರಿಪ್ಪನ್ ಪೇಟೆಯ ಯುವಕ : ಅಗ್ನಿಶಾಮಕ ದಳದವರಿಂದ ಬಿರುಸಿನ ಕಾರ್ಯಾಚರಣೆ

ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ನಲ್ಲಿ ವೃದ್ದನೊಬ್ಬನನ್ನು  ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿ ಸುಮಾರು 48 ಗಂಟೆ ಕಳೆದಿದ್ದು ಇನ್ನೂ ಯುವಕನ ಸುಳಿವು ಪತ್ತೆಯಾಗಿಲ್ಲ.   ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ಎಂಬ ಯುವಕ ಮಂಗಳವಾರ ಬೆಳಿಗ್ಗೆ ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ಬರುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲ್ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ…

Read More

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ :

ಶಿವಮೊಗ್ಗ ಡಿಸಿಸಿ ಬ್ಯಾಂಕ್’ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಡಿಸಿಸಿ ಬ್ಯಾಂಕ್’ನಲ್ಲಿ 98 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಹಸ್ತದಲ್ಲಿ ಅಥವಾ ಕಂಪ್ಯೂಟರ್ ಮೂಲಕ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು. ಪೂರ್ಣ ವಿವರ, ಅಗತ್ಯ ದಾಖಲೆಗಳನ್ನು ಸ್ವಯಂ ದೃಢೀಕೃತ ಪ್ರತಿ ಹಾಗೂ ಅರ್ಜಿ ಶುಲ್ಕದೊಂದಿಗೆ ಪಾವತಿಸಬೇಕು.2022ರ ಮೇ 16ರ ಸಂಜೆ 5.30ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1) ಆಪ್ತ…

Read More

ಪಾಲೀಶ್ ಮಾಡಿಕೊಡುವ ನೆಪದಲ್ಲಿ ಮಹಿಳೆಯ ಎರಡೂವರೆ ಲಕ್ಷ ಮೌಲ್ಯದ ಮಾಂಗಲ್ಯ ಸರ ಅಪಹರಣ :

ಒಂಟಿ ಮಹಿಳೆಯ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಆಭರಣಗಳನ್ನು ಪಾಲಿಶ್ ಮಾಡಿಕೊಡುವ ನೆಪದಲ್ಲಿ  ಮಹಿಳೆಯ ಮಾಂಗಲ್ಯ ಸರ  ಅಪಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೋಟೆ ಕೊಪ್ಪ ಗ್ರಾಮದ ಸರೋಜಮ್ಮ ಅವರೇ ಮಾಂಗಲ್ಯ ಸರ ಕಳೆದುಕೊಂಡವರು. ಪಾಲಿಶ್ ಮಾಡಿಕೊಡುವ ನೆಪದಲ್ಲಿ ಸರೋಜಮ್ಮ ಅವರ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಅವರ ಗಮನ ಬೇರೆಡೆ ಸೆಳೆದು ಕ್ಷಣ ಮಾತ್ರದಲ್ಲಿ ನಲವತ್ತು ಗ್ರಾಂ ತೂಕದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾರೆ.ಮೊದಲು ಬೆಳ್ಳಿಯ ಗೆಜ್ಜೆಯನ್ನು…

Read More