POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ – ಹೊಸನಗರದ 27 ವರ್ಷದ ಯುವಕನಿಗೆ 01 ವರ್ಷ ಶಿಕ್ಷೆ ಪ್ರಕಟ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಕಳೆದ ವರ್ಷ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಹಿನ್ನಲೆಯ ಪ್ರಕರಣದಲ್ಲಿ ಆರೋಪಿ 27 ವರ್ಷದ ಯುವಕನಿಗೆ 01 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.




2022ನೇ ಸಾಲಿನಲ್ಲಿ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನೊಂದ ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿರುತ್ತದೆ. 




ಆಗಿನ ತನಿಖಾಧಿಕಾರಿಗಳಾದ ಮಧುಸೂದನ್ ಜಿ.ಕೆ. ಸಿಪಿಐ ಹೊಸನಗರ ವೃತ್ತರವರು ಪ್ರಕರಣದ ತನಿಖೆ ಕೈಗೊಂಡು ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿರುತ್ತಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, (POCSO) ಶಿವಮೊಗ್ಗ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು.

ಮಾನ್ಯ ನ್ಯಾಯಾಧೀಶರಾದ ಮೋಹನ ಜೆ. ಎಸ್ ರವರು ದಿನಾಂಕ 11-01-2023 ರಂದು ಆರೋಪಿತನ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿತನಾದ ಹೊಸನಗರ ತಾಲ್ಲೂಕಿನ  27 ವರ್ಷದ ಯುವಕನಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 30,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 01 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿರುತ್ತಾರೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.