ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಾಳೆ ಹಿಂದೂ ಜಾಗರಣಾ ವೇದಿಕೆ ಬಂದ್ಗೆ ಕರೆಕೊಟ್ಟಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಸಹ ನಡೆಸಿದೆ. ಜ.30ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಶಿರಾಳಕೊಪ್ಪ ಬಂದ್ ನಡೆಸಲಾಗುವುದು ಎಂದು ಮಾಹಿತಿ ನೀಡಿದೆ.
ಪೊಲೀಸರ ದೌರ್ಜನ್ಯ ಮತ್ತು ಶಿರಾಳಕೊಪ್ಪದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುತ್ತಿದ್ದು ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ(ಹಿಂಜಾವೇ) ಶಿರಾಳಕೊಪ್ಪ ಬಂದ್ ಗೆ ಕರೆಕೊಟ್ಟಿರುವುದು ಹಲವು ಕುತೂಹಲಕ್ಕೆ ಕಾರಣವಾಗಿದೆ.
ಬಂದ್ ನಿಮಿತ್ತ ಸ್ವಯಂ ಘೋಷಿತ ಅಂಗಡಿಮುಂಗಟ್ಟು ಮುಚ್ಚಲು ಕರೆ ನೀಡಲಾಗಿದೆ. ಗೋಹತ್ಯೆ, ಲವ್ ಜಿಹಾದ್, ಹಿಂದೂಗಳ ರಕ್ಷಣೆ ಮಾಡಬೇಕಿದ್ದ ಪೊಲೀಸರು ಮೂಲಭೂತವಾದಿಗಳ ಕೈಗೊಂಬೆಯಾಗಿದ್ದಾರೆ. ನಾಲ್ವರು ಅಧಿಕಾರಿಗಳನ್ನ ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಹಿಂದೂ ಸಂಘಟನೆ ಬಂದ್ ನಡೆಸುತ್ತಿದೆ.
ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಲಾಗಿದೆ. ನಾಳೆ ವಾಲ್ಮೀಕಿ ಸಮುದಾಯ ಭವನದಿಂದ ಶಿರಾಳಕೊಪ್ಪ ಠಾಣೆಯ ವರೆಗೆ ಕಾಲ್ನಡೆಗೆ ಜಾಥ ನಡೆಸಲಾಗುತ್ತಿದೆ. ಸಾವಿರಾರು ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ಈ ಕುರಿತು ನಿನ್ನೆ ಹಿಂಜಾವೇ ಜಿಲ್ಲಾ ಅಧ್ಯಕ್ಷ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ.
ಇದನ್ನ ವಿರೋಧಿಸಿ ಅಂಜುಮನ್ ಇ-ಇಸ್ಲಾಮ್ ಕಮಿಟಿ ಶಿರಾಳಕೊಪ್ಪ ಸಬ್ ಇನ್ ಸ್ಪೆಕ್ಟರ್ ಮಂಜುನಾಥ್ ಕುರಿಯವರಿಗೆ ಮನವಿ ಮಾಡಿ ಹಿಂದೂ ಜಾಗರಣ ವೇದಿಕೆ ಶಿರಾಳಕೊಪ್ಪದಲ್ಲಿ ಮುಸ್ಲೀಂ ಸಮುದಾಯ ಶೇ. 72 ರಷ್ಟಿದೆ ಎನ್ನುತ್ತಿದೆ ಇದು ಸತ್ಯಕ್ಕೆ ದೂರವಾಗಿದೆ. ಹಿಂದೂ ಮುಸ್ಲೀಂ ಸೌಹಾರ್ಧವಾಗಿ ಶಿರಾಳಕೊಪ್ಪದಲ್ಲಿ ಬದುಕುತ್ತಿದ್ದಾರೆ. ಹಿಂಜಾವೇ ಈ ಸೌಹಾರ್ಧವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ.
ಪೊಲೀಸ್ ಅಧಿಕಾರಿಗಳು ನಾಳೆ ನಡೆಯುವ ಬಂದ್ ನ್ನ ತಡೆಯದಿದ್ದರೆ ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುಂದೆ ಧರಣಿ ಕೂರುವುದಾಗಿದೆ ಸಂಘಟನೆ ಎಚ್ಚರಿಸಿದೆ. ಇದಕ್ಕೂ ಮೊದಲು ಎರಡೂ ಸಮುದಾಯವನ್ನ ಕರೆಯಿಸಿ ಶಾಂತಿ ಸಭೆ ನಡೆಸಬೇಕು ಎಂದು ಸಂಘಟನೆ ಕೋರಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್