ಶಿವಮೊಗ್ಗ ನಗರದ ಸೂಳೆಬೈಲ್ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.
ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ.
ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ 7 ಹಸುಗಳನ್ನ ದಾರುಣವಾಗಿ ಹತ್ಯೆ ಮಾಡಲಾಗಿದ್ದು ಉಳಿದ 8 ಗೋವುಗಳನ್ನ ಸಂರಕ್ಷಿಸಲಾಗಿದೆ. ಈ ವೇಳೆ ಅಜೀಜ್ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಗುಪ್ತಚರ ಮಾಹಿತಿ ಹಿನ್ನಲೆಯಲ್ಲಿ ತುಂಗನಗರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯಲ್ಲಿ ಗೋವುಗಳ ಕಾಲುಗಳನ್ನ ಕಟ್ಟಿ ಕುತ್ತಿಗೆಯನ್ನ ಸೀಳಿ ಹತ್ಯೆ ಮಾಡಲಾಗಿದೆ. ಹಸುಗಳು ರಕ್ತದ ಮಡುವಿನಲ್ಲಿ ಮಲಗಿರುವ ದೃಶ್ಯ ಲಭ್ಯವಾಗಿವೆ.
8 ಗೋವುಗಳು ಜೀವಂತವಾಗಿ ಪತ್ತೆಯಾಗಿವೆ. ಇವುಗಳನ್ನ ತುಂಗಾ ನಗರ ಪೊಲೀಸರು ರಕ್ಷಿಸಿದ್ದಾರೆ. ಗೋಮಾಂಸ ಮಾರಾಟಕ್ಕೆ ಗೋವುಗಳನ್ನ ಕೊಂದಿರುವುದಾಗಿ ತಿಳಿದು ಬಂದಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್