Headlines

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ 
ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.




ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.




ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ. ಜೆ.ಎಸ್.ಮೋಹನ್ ಅವರು ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆ 19 ವರ್ಷದ ಯುವಕನಿಗೆ ಇವತ್ತು ಶಿಕ್ಷೆ ಪ್ರಕಟಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 6 ತಿಂಗಳು ಸಾದಾ ಶಿಕ್ಷೆ ನೀಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಅಭಿಯೋಜಕರಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.



About The Author

Leave a Reply

Your email address will not be published. Required fields are marked *