Headlines

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ.





ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ.



ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗಾಂಜಾ ಜತೆಗೆ ಸಾಗಾಣಿಕೆಗೆ ಬಳಸಿದ್ದ ಬೈಕ್ ವಶಕ್ಕೆ ಪಡೆದು ಎನ್.ಡಿ.ಪಿ.ಎಸ್ ಕಾಯ್ದೆ 1985 ಕಲಂ (ಸಿ) ಮತ್ತು 20 (2) (ಬಿ), 25 ಹಾಗೂ ವ್ಯಕ್ತಿಯ ವಿರುದ್ಧ 27 (ಬಿ) ಅಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ನಿರ್ದೇಶನ ಮತ್ತು ಶಿವಮೊಗ್ಗ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಾಗರ ವಿಭಾಗದ ವಲಯ ನಿರೀಕ್ಷಕರು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.



Leave a Reply

Your email address will not be published. Required fields are marked *