ರಿಪ್ಪನ್‌ಪೇಟೆ : ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ್ದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕರ ವಿರುದ್ದವಲ್ಲ ಎಂದು ಮಾರುತಿಪುರ ಗ್ರಾಪಂ ಅಧ್ಯಕ್ಷ ಎಚ್ ಬಿ ಚಿದಂಬರ ಸ್ಪಷ್ಟನೆ ನೀಡಿದ್ದಾರೆ.
ಈ ಘಟನೆ ಬಗ್ಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ಚಿದಂಬರಂ ಬಳಿ ದೂರವಾಣಿ ಮೂಲಕ ಸ್ಪಷ್ಟನೆ ಕೇಳಿದಾಗ ಮಾತನಾಡಿದ ಅವರು ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿರುವುದು ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ವಿರುದ್ದವೇ ಹೊರತು ಶಾಸಕ ಹರತಾಳು ಹಾಲಪ್ಪ,ಗೃಹ ಸಚಿವ ಆರಗ ಜ್ಞಾನೇಂದ್ರ ,ಸಂಸದ ಬಿ ವೈ ರಾಘವೇಂದ್ರ ವಿರುದ್ದವಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಿನ್ನೆಯ ಘಟನೆ ಬಗ್ಗೆ ಹಲವಾರು ಸುದ್ದಿ ಮಾದ್ಯಮಗಳು ಮಾರುತಿಪುರ ಗ್ರಾಪಂ ಅಧ್ಯಕ್ಷ ಚಿದಂಬರ ಗೃಹ ಸಚಿವ ಹಾಗೂ ಸಂಸದರ ಮುಂಭಾಗದಲ್ಲಿ ಶಾಸಕ ಹರತಾಳು ಹಾಲಪ್ಪ ರವರಿಗೆ ಕಪ್ಪು ಬಾವುಟ ಪ್ರದರ್ಶಿದ್ದಾರೆ ಎಂದು ಸುದ್ದಿ ಮಾಡಿತ್ತು ಈ ಬಗ್ಗೆ ಉತ್ತರಿಸಿದ ಚಿದಂಬರಂ ಶಾಸಕ ಹರತಾಳು ಹಾಲಪ್ಪ ರವರ ಮೇಲೆ ನಮಗೆ ಅಪಾರವಾದ ಗೌರವವಿದೆ ನಾವು ಕೇವಲ ಏಕಪಕ್ಷೀಯವಾಗಿ ಅಧಿಕಾರ ನಡೆಸುತ್ತಿರುವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ವಿರುದ್ದವಷ್ಟೇ ಕಪ್ಪು ಬಾವುಟ ಪ್ರದರ್ಶಿಸಿದ್ದು ಎಂದು ಹೇಳಿದರು.
ಘಟನೆಯ ಹಿನ್ನಲೆ
ಸೋಮವಾರ ನಡೆದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿ ಶಂಕುಸ್ಥಾಪನೆ ಕಾರ‍್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹೆಸರನ್ನು ಸೇರಿಸಿಲ್ಲ. ದೇವಸ್ಥಾನಕ್ಕೆ ನಡೆದುಕೊಳ್ಳುವ ಕೆಲ ಸಮುದಾಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ.ಚಿದಂಬರ ವೇದಿಕೆ ಮುಂಭಾಗ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು.
ಈ ಸಂಧರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಂತೆ ಅವರನ್ನು ಪೊಲೀಸರು ವಶಕ್ಕೆ ಪಡೆದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು. ಕಾರ್ಯಕ್ರಮ ಮುಗಿದ ಬಳಿಕ ಬಿಡುಗಡೆಗೊಳಿಲಾಗಿತ್ತು.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್