ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.




ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.


ಸೃಷ್ಠಿಯ ವಿಸ್ಮಯದಲ್ಲಿ ನಾವು ಅಣು ಮಾತ್ರ. ತಾಯಿಯ ಹೃದಯ ಎಂದೂ ಕಲ್ಲಾಗದು. ಅದು ಜೇನಿನಂತೆ ಸವಿ. ಇಲ್ಲಿ ಜೇನುಕಲ್ಲಮ್ಮ ದೇವಿಯ ದೇವಸ್ಥಾನ ನಿರ್ಮಾಣ ಕಾರ‍್ಯ ಭಕ್ತರ ಬಹುದಿನಗಳ ಕನಸನ್ನು ನನಸು ಮಾಡಲು ಹೊರಟಿದೆ. ಸರಕಾರ ಈ ಕಾರ್ಯಕ್ಕೆ ಇನ್ನೂ ಹೆಚ್ಚಿನ ಮಹತ್ವ ನೀಡಲಿ ಎಂದರು.




ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಧರ್ಮದ ಹೆಸರಿನಲ್ಲಿ ಹಿಂಸೆ, ಭಯೋತ್ಪಾದನೆ ಹುಟ್ಟುವಂತೆ ಮಾಡುವುದು ಸರಿಯಲ್ಲ. ಶಾಂತಿ ಸಹಬಾಳ್ವೆಯನ್ನು ಬಿತ್ತುವ ಹಿಂದೂಧರ್ಮ ಸಾಂಸ್ಕೃತಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ ಎಂದರು.

ಭಯೋತ್ಪಾದನೆ ಹುಟ್ಟುವಂತೆ ಮಾಡುವುದು ಸರಿಯಲ್ಲ. ಶಾಂತಿ ಸಹಬಾಳ್ವೆಯನ್ನು ಬಿತ್ತುವ ಹಿಂದೂಧರ್ಮ ಸಾಂಸ್ಕೃತಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ ಎಂದರು.

ಶಾಸಕ ಹಾಗೂ ಎಮ್ ಎಸ್ ಐ ಎಲ್ ಅಧ್ಯಕ್ಷ  ಹರತಾಳು ಹಾಲಪ್ಪ  ಮಾತನಾಡಿ, ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಸ್ಥಾನ ಶಿವಮೊಗ್ಗ ಜಿಲ್ಲೆಯ ಪ್ರಮುಖ ಧಾರ್ಮಿಕ ತಾಣವಾಗಿದೆ. ಮುಂದಿನ 5 ವರ್ಷಗಳಲ್ಲಿ 5ಕೋಟಿ ರೂ. ಅನುದಾನದಲ್ಲಿ ಇಲ್ಲಿನ ದೇವಸ್ಥಾನವನ್ನು ಅಭಿವೃದ್ಧಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.


ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಇಲ್ಲಿನ ಸುಂದರ ಪರಿಸರವನ್ನು ಹಾಳುಗೆಡವದೇ, ಅದನ್ನು ಉಳಿಕೊಂಡು ದೇವಸ್ಥಾನವನ್ನು ಅಭಿವೃದ್ಧಿಪಡಿಸುವುದು ನಮ್ಮಗುರಿ. ಆಸ್ತಿಕರಿಗೆ ನಂಬಿಕೆಯ ಸ್ಥಳವಾಗಿ, ಪ್ರವಾಸಿ ತಾಣವಾಗಿ ರೂಪುಗೊಳ್ಳುವ ವಿಶ್ವಾಸವಿದೆ. ಎಂದರು.ಶಾಸಕ ಹಾಗೂ ಎಮ್ ಎಸ್ ಐ ಎಲ್ ಅಧ್ಯಕ್ಷ  ಹರತಾಳು ಹಾಲಪ್ಪ  ಮಾತನಾಡಿ, ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಸ್ಥಾನ ಶಿವಮೊಗ್ಗ ಜಿಲ್ಲೆಯ ಪ್ರಮುಖ ಧಾರ್ಮಿಕ ತಾಣವಾಗಿದೆ. ಮುಂದಿನ 5 ವರ್ಷಗಳಲ್ಲಿ 5ಕೋಟಿ ರೂ. ಅನುದಾನದಲ್ಲಿ ಇಲ್ಲಿನ ದೇವಸ್ಥಾನವನ್ನು ಅಭಿವೃದ್ಧಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಮೂಲೆಗದ್ದೆಯ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ಗರ್ತಿಕೆರೆಯ ನಿಟ್ಟೂರು ಮಠದ ಶ್ರೀರೇಣುಕಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದು, ಭಕ್ತಾದಿಗಳಿಗೆ ಶುಭ ಹಾರೈಸಿದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪ್ರಾಸ್ತಾವಿಕ ಮಾತನಾಡಿದರು.

ತಹಶೀಲ್ದಾರ್ ವಿ.ಎಸ್ ರಾಜೀವ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಟ್ಟಡ ಸಮಿತಿ ಸದಸ್ಯರು ಮತ್ತು ಸಾವಿರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಪ್ಪು ಬಾವುಟ ಪ್ರದರ್ಶನ :

ಈ ಕಾರ‍್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರ ಹೆಸರನ್ನು ಸೇರಿಸಿಲ್ಲ. ದೇವಸ್ಥಾನಕ್ಕೆ ನಡೆದುಕೊಳ್ಳುವ ಕೆಲ ಸಮುದಾಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಬಿ.ಚಿದಂಬರ ವೇದಿಕೆ ಮುಂಭಾಗ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದರು.


ವ್ಯವಸ್ಥಾಪನಾ ಸಮಿತಿ ಅಧ್ಯಕರ ವಿರುದ್ಧ ಧಿಕ್ಕಾರ ಕೂಗುತ್ತಿದ್ದಂತೆ ಅವರನ್ನು ಪೊಲೀಸರು ವಶಕ್ಕೆ ಪಡೆದು ರಿಪ್ಪನ್‌ಪೇಟೆ ಠಾಣೆಗೆ ಕರೆದೊಯ್ಯಲಾಯಿತು. ಕಾರ್ಯಕ್ರಮ ಮುಗಿದ ಬಳಿಕ ಬಿಡುಗಡೆಗೊಳಿಲಾಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

10 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

10 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

17 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

2 days ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

2 days ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago