ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ.




ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.




ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತಕ್ಷಣ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




ಮಾಹಿತಿ – ಬಿ ಡಿ ರವಿ ಆನಂದಪುರ
ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Share
Published by
ರಫ಼ಿ ರಿಪ್ಪನ್ ಪೇಟೆ

Recent Posts

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ ಡಿಟೇಲ್ಸ್

‘ಎಲ್ಲದಕ್ಕೂ ಒಂದು ಲೆಕ್ಕ ಇರಲಿ’ — ಸಾರ್ವಜನಿಕ ಕಾರ್ಯಕ್ರಮಗಳ ಮೇಲೆ ಸರ್ಕಾರದ ಹೊಸ ನಿಯಮ! ಏನಿದು ಹೊಸ ಬಿಲ್? ಇಲ್ಲಿದೆ…

2 hours ago

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ

RIPPONPETE | ಬೀದಿ ಬದಿಯ ಸರ್ಕಸ್‌ನಲ್ಲಿ ಅಪ್ರಾಪ್ತ ಬಾಲಕಿ ಬಳಕೆ ಆರೋಪ: ಪೊಲೀಸರಿಂದ ರಕ್ಷಣೆ Police rescue a minor…

9 hours ago

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ

ಅರಸಾಳು ಕೆರೆ ಬಳಿ 20 ಅಡಿ ಆಳದ ಕಂದಕಕ್ಕೆ ಉರುಳಿದ ಲಾರಿ; ತಪ್ಪಿದ ಭಾರಿ ಅನಾಹುತ A truck carrying…

16 hours ago

ತಂದೆ–ಮಗನ ಜಗಳ ಕೊಲೆಯಲ್ಲಿ ಅಂತ್ಯ; ಮೃತದೇಹ ಬಾವಿಗೆ ಎಸೆದ ಆರೋಪ

ಸಾಗರ: ಜೈಲಿನಿಂದ ಬಿಡುಗಡೆಯಾದ ತಂದೆಯನ್ನೇ ಮಗ ಕೊಲೆ ಮಾಡಿದ ಆರೋಪ; ಮೃತದೇಹ ಬಾವಿಗೆ ಎಸೆದು ಮುಚ್ಚಿಟ್ಟ ಶಂಕೆ A man…

17 hours ago

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ – ಇಲ್ಲಿದೆ ಸಂಪೂರ್ಣ ವಿವರ!

ಸಚಿವ ಸಂಪುಟದ ಖಾತೆ ಹಂಚಿಕೆ ಫೈನಲ್: ಹಿರಿಯ ಸಚಿವರ ಖಾತೆಗಳಲ್ಲೂ ಭಾರೀ ಬದಲಾವಣೆ!10 ದಿನಗಳ ಕುತೂಹಲಕ್ಕೆ ತೆರೆ - ಇಲ್ಲಿದೆ…

1 day ago

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆಯಲ್ಲೇ ಭತ್ತ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ; ಹೆದ್ದಾರಿಪುರ ಸಂಪರ್ಕ ರಸ್ತೆ ದುರಸ್ತಿಗೆ ಆಗ್ರಹ Villagers protest by planting…

1 day ago