ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಪ್ರಕರಣದಲ್ಲಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.
ಮೊದ್ಲೆಸರ ಗ್ರಾಮದ ಕೀರ್ತನಾ(15) ಮೃತಪಟ್ಟ ದುರ್ಧೈವಿಯಾದ್ದಾರೆ.
ಆನಂದಪುರ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 9 ನೇ ತರಗತಿ ವ್ಯಾಸಾಂಗ ಮಾಡುತಿದ್ದ ಕೀರ್ತನಾ ಶನಿವಾರ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂದು ಶಿವಮೊಗ್ಗದ ಆಸ್ಪತ್ರೆಗೆ ದಾಖಾಲಾಗಿದ್ದಳು.
ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಶನಿವಾರ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತಕ್ಷಣ ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು.
ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.