Headlines

ಆನಂದಪುರ ಸಮೀಪದಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.




ಗೌತಮಪುರ ನಿವಾಸಿಗಳಾದ ಪ್ರದೀಪ್ (25) ಹಾಗೂ ದಯಾನಂದ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆನಂದಪುರದಿಂದ ಸಂತೆ ಮುಗಿಸಿಕೊಂಡು ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ  ಕಣ್ಣೂರು ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.


ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದುಸೂಕ್ತ ಸೂಚನಾ ಫಲಕವಿಲ್ಲದೆ ಲಾರಿ ನಿಲ್ಲಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸುತಿದ್ದಾರೆ ಎಂದು ತಿಳಿದುಬಂದಿದೆ.




ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಸ್ಥಳಕ್ಕೆ ಸಾಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.



Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.