ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು.

ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು.

ನಗರದ ಸೈನ್ಸ್ ಮೈದಾನದಲ್ಲಿ ನಾರಾಯಣಗುರು ವಿಚಾರ ವೇದಿಕೆ, ನಾರಾಯಣಗುರು ಸಮಾಜ ಹಿತರಕ್ಷಣಾ ವೇದಿಕೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಪ್ರವರ್ಗ 2ಎ ಮೀಸಲಾತಿ ಸಂರಕ್ಷಣೆ ಹಕ್ಕೊತ್ತಾಯ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಈಡಿಗ ಸಮುದಾಯದಲ್ಲಿ ಸಂಘಟನೆ ಕೊರತೆ ಇದೆ. ಬೇರೆ ಸಮುದಾಯಗಳು ಪ್ರವರ್ಗದ 2ಎ ಮೀಸಲಾತಿ ಕೇಳುತ್ತಿವೆ. ಇದರ ಪರಿಣಾಮದಿಂದ ಹಿಂದುಳಿದ ವರ್ಗದ 102 ಜಾತಿಗಳ ಹಕ್ಕುಗಳನ್ನು ಕಸಿದುಕೊಳ್ಳುವ ಯತ್ನ ನಡೆಸಲಾಗುತ್ತದೆ ಎಂದಿ ಕಳವಳ ವ್ಯಕ್ತಪಡಿಸಿದರು.

ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಸೌಲಭ್ಯ ಹಾಗೂ ಹಕ್ಕುಗಳಿಗೆ ಹೋರಾಟ ನಡೆಸಿದಾಗ ಮಾತ್ರ ಸರ್ಕಾರ ಅವನ್ನು ನೀಡಲಿದೆ. ಹೀಗಾಗಿ ಹೋರಾಟ ನಿರಂತರವಾಗಿ ನಡೆಯಬೇಕು. ಆ ಮೂಲಕ ಸೌಲಭ್ಯಗಳನ್ನು ಪಡೆಯಬೇಕು. ಅದಕ್ಕೆ ಸಂಘಟನೆ ಅತೀ ಮುಖ್ಯ ಎಂದರು.

ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ಹೋರಾಟವು ಬೇರೋಬ್ಬರ ಅನ್ನದ ತಟ್ಟೆಗೆ ಕೈ ಹಾಕಲು ಅಲ್ಲ.ನಮ್ಮ ತಟ್ಟೆಯಲ್ಲಿರುವ ಅನ್ನವನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕಿದೆ ಎಂದರು.

ಸಿಂಗದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಎಸ್. ರಾಮಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀಅರುಣಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವೇದಿಕೆಯಲ್ಲಿ ಮಾಜಿ ಶಾಸಕ ಡಾ. ಜಿ..ಡಿನಾರಾಯಣಪ್ಪ, ಪ್ರಮುಖರಾದ ಡಾ.ರಾಜನಂದಿನಿ, ಪ್ರವೀಣ್ ಹಿರೆಇಡಗೋಡು, ಶ್ರೀಧರ್ ಹುಲ್ತಿಕೊಪ್ಪ, ಗೀತಾಂಜಲಿ ದತ್ತಾತ್ರೇಯ, ರಾಘವೇಂದ್ರ ಮುಡಬ, ಕಲಗೋಡು ರತ್ನಾಕರ ಮೊದಲಾದವರು ಇದ್ದರು. ಈಡಿಗರ ಭವನದಿಂದ ಸೈನ್ಸ್ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಯಿತು.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

3 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

4 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago