ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ.




ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ ಮಲಗಿ ಪ್ರತಿಭಟನೆ ಆರಂಭಿಸಿದರು.


ನಾನು ರಾಜಕೀಯವನ್ನು‌ ಪವರ್, ದುಡಿಮೆ, ದುಡ್ಡಿಗಾಗಿ ಆಯ್ಕೆ ಮಾಡಿಕೊಂಡಿಲ್ಲ. ಎಫ್ಐಆರ್ ನಲ್ಲಿ ದಾಖಲಾದ ಮೂವರು ಕಾಂಗ್ರೆಸ್ ಕಾರ್ಯಕರ್ತರು ಸ್ಪಾಟ್ ನಲ್ಲಿ ಇದ್ದರೆ ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ದೆ ಮಾಡಲ್ಲ. ದುರುದ್ದೇಶ ಪೂರಕವಾಗಿ ಪ್ರಕರಣದಲ್ಲಿ ಭಾಗಿಯಾಗದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಾಗಿದೆ. ಸಿಸಿಟಿವಿ ಪ್ಯೂಟೇಜ್ ಚೆಕ್ ಮಾಡಿ ಹೇಳಿ. ತನಿಖೆ ಮಾಡದೆ ನಿರಪರಾಧಿಗಳ ಮೇಲೆ ಪ್ರಕರಣ ದಾಖಲಿಸುವ ಉದ್ದೇಶ ಏನಿತ್ತು.

ಇನ್ನೂ ಡಿವೈಎಸ್​ಪಿಯವರು ಕಿಮ್ಮನೆಯವರ ಬಳಿ‌ ಮಾತನಾಡಿ ಪ್ರಕರಣ ಇತ್ಯರ್ಥ ಮಾಡುತ್ತೇನೆ. ಆರೋಪಿಗಳು ಅಲ್ಲದವರಿಗೆ ಬಿ ಫಾರ್ಮ್ ನೀಡುತ್ತೇನೆ ಎಂದರೂ ಇದನ್ನ ಅಲ್ಲಗಳೆದ ಕಿಮ್ಮನೆ ರತ್ನಾಕರ್​ ನೀವು ಮಾಡಿದೆಲ್ಲ ಸಾಕು. ಪರವಾಗಿಲ್ಲ ನೀವು ರೆಸ್ಟ್ ತೆಗೆದುಕೊಳ್ಳಿ ನಾನು ಬಿ ರಿಪೋರ್ಟ್ ನೀಡುವವರೆಗೆ ಮನೆಗೆ ಹೋಗಲ್ಲ ಎಂದು ಪಟ್ಟು ಹಿಡಿದರು.




ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ರಾಘವೇಂದ್ರ ಪುಟ್ಟೊಡ್ಲು, ಯುವ ಕಾಂಗ್ರೆಸ್ನ ರಾಷ್ಟ್ರೀಯ ವಕ್ತರರಾದ ಆದರ್ಶ ಹುಂಚದಕಟ್ಟೆ, ಪಟ್ಟಣ ಪಂಚಾಯತಿ ಸದಸ್ಯರುಗಳಾದ ಗೀತಾ ರಮೇಶ್, ಶಬನ, ಕಾಂಗ್ರೆಸ್ ಯುವ ಪ್ರಮುಖರಾದ ಜಯಕರ  ಶೆಟ್ಟಿ, ಶೇಡ್ಗರ್ ಗ್ರಾಮ ಪಂಚಾಯಿತಿ ಸದಸ್ಯ ಪಣಿರಾಜ್, ಸಿಂಗನಬಿದ್ರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ   ನವೀನ್,ವಿಠಲ್ ನಗರ ಸುಬ್ರಹ್ಮಣ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ನಮ್ರತ್, ಜಯಪ್ರಕಾಶ್ ಶೆಟ್ಟಿ, ಜಾವೀದ್, ಸೇರಿದಂತೆ ಅನೇಕರು ಉಪಸ್ಥಿತರಿದ್ದಾರೆ.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆ: ಪಾನೀಯ, ಕೇಕ್ ವಿತರಿಸಿ ಸೌಹಾರ್ದತೆ ಮೆರೆದ ಹಿಂದೂ ಸಂಘಟನೆ ಕಾರ್ಯಕರ್ತರು ರಿಪ್ಪನ್ ಪೇಟೆ : ಬಾಳಿನ…

3 hours ago

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ

ಸೆ.5ರ ಶಿಕ್ಷಕರ ದಿನಾಚರಣೆಗೆ ಗೈರು; ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆರೋಪ BJP leaders in Sagar have…

3 hours ago

ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾದಕ ವ್ಯಸನ ವಿರುದ್ಧ ಸಮರ: ‘ಗಾಂಜಾ ಬೇಡ ಬ್ರೋ’ ಅಭಿಯಾನಕ್ಕೆ ಭರ್ಜರಿ ಸ್ಪಂದನೆ

ಯುವಶಕ್ತಿಯೇ ಎಚ್ಚೆತ್ತುಕೋ: ಈದ್ ಮಿಲಾದ್ ಸಂಭ್ರಮದಲ್ಲಿ ಮೊಳಗಿದ ‘ನಶಾಮುಕ್ತ ಭಾರತ’ ಸಂದೇಶ Ripponpete Police launched an anti-drug awareness…

10 hours ago

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ

ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…

1 day ago

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ!

ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…

1 day ago

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ

ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…

2 days ago