ಕಾರು ಅಪಘಾತ – ಸಹಾಯ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದ ಗೃಹ ಸಚಿವ ಆರಗ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಸಮೀಪ ಅಪರಿಚಿತ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿದ್ದ ಶಿವಮೊಗ್ಗದ ನಿವಾಸಿಗಳು ಕಾರ್ಕಳಕ್ಕೆ ಹೋಗುತ್ತಿದ್ದರು‌. ಮಕ್ಕಳ ಪರೀಕ್ಷೆ ಬರೆಸುವ ಕಾರಣಕ್ಕೆ ಶಿವಮೊಗ್ಗದ ಕುಟುಂಬ ಹೋಗುತ್ತಿತ್ತು. ಈ ವೇಳೆ ಅಚಾನಕ್ಕಾಗಿ ರಸ್ತೆ ಪಕ್ಕದ ಚರಂಡಿಗೆ ಅವರ ಕಾರು ಇಳಿದು, ಅದನ್ನು ಮೇಲೆ ತರಲಾಗದೇ ಒದ್ದಾಡುತ್ತಿದ್ದರು.




ಈ ಸಂದರ್ಭದಲ್ಲಿ, ಇದೇ ಮಾರ್ಗವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ದಾರಿಯಲ್ಲಿ ಕಾರು ಅಪಘಾತವಾಗಿದ್ದ ದೃಶ್ಯ ಕಂಡ ತಕ್ಷಣ ತಮ್ಮ ಕಾರು ನಿಲ್ಲಿಸಲು ಡ್ರೈವರ್ ಗೆ ಸೂಚಿಸಿದರು. ಜತೆಗೆ ತಮ್ಮೊಡನಿದ್ದವರನ್ನೂ ಕಾರಿನಿಂದ ಇಳಿಸಿದರು.


ಅಪಘಾತಕ್ಕೀಡಾದ ಕಾರನ್ನು ತಮ್ಮ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಮೇಲಕ್ಕೆತ್ತಿಸಿ, ಆ ಕುಟುಂಬ ಕಾರ್ಕಳಕ್ಕೆ ತೆರಳಲು ಸಹಾಯ ಮಾಡಿದರು. ಅಪಘಾತಕ್ಕೀಡಾದ ಕುಟುಂಬದವರಿಗೆ ಅದೃಷ್ಟವಶಾತ್ ಯಾವುದೇ ಹಾನಿಯಾಗಿರಲಿಲ್ಲ. ನಂತರ ಗೃಹ ಸಚಿವರು ಅವರೆಲ್ಲರಿಗೂ ಧೈರ್ಯ ತುಂಬಿ ಕಳುಹಿಸಿದರು.




ಸುಮಾರು ಒಂದು ವರ್ಷದ ಹಿಂದೆ ನಡೆದ ಅಪಘಾತ
ಪ್ರಕರಣವೊಂದರಲ್ಲೂ ಗೃಹ ಸಚಿವರು ಮಾನವೀಯತೆ ತೋರಿದ್ದರು. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುವ ಮಾರ್ಗ ಮಧ್ಯದ ಮಂಡಗದ್ದೆ ಬಳಿ ಬೈಕ್ ಅಪಘಾತವಾಗಿತ್ತು. ಬೈಕ್‌ನಲ್ಲಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಇದನ್ನು ಗಮನಿಸಿದ ಗೃಹ ಸಚಿವರು ತಮ್ಮ ಕಾರನ್ನು ನಿಲ್ಲಿಸಿ, ಸ್ವತಃ ತಾವೇ ಗಾಯಾಳುಗಳಿಗೆ ನೀರು ಕುಡಿಸಿ ಉಪಚರಿಸಿದ್ದರು. ನಂತರ ಆ್ಯಂಬುಲೆನ್ಸ್ ಬರುವುದು ತಡವಾಗುತ್ತದೆಂದು, ತಮ್ಮ ಎಸ್ಕಾರ್ಟ್ ವಾಹನದಲ್ಲೇ ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆತಂದು ದಾಖಲು ಮಾಡಿ ಚಿಕಿತ್ಸೆ ಕೊಡಿಸಿ ಸಮಯ ಪ್ರಜ್ಞೆ ಮೆರೆದಿದ್ದರು.



ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ

ರಿಪ್ಪನ್‌ಪೇಟೆ ಸುತ್ತಮುತ್ತ ನಾಳೆ ಕರೆಂಟ್ ಇಲ್ಲ! ಯಾವೆಲ್ಲ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ? ಈ ಸುದ್ದಿ ನೋಡಿ Power outage in…

3 hours ago

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ

ಹಿರಿಯ ನಾಗರಿಕರಿಂದ ನಿವೃತ್ತ ಸರ್ಕಾರಿ ನೌಕರರಿಗೆ ವಿಶೇಷ ಸನ್ಮಾನ Retired government employees were specially honoured by senior…

6 hours ago

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು: ಶಾಸಕ ಬೇಳೂರು ಗೋಪಾಲಕೃಷ್ಣ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತಂದರೆ ₹10…

18 hours ago

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ – ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು

RIPPONPETE | ಶಿಕ್ಷಣ ಕ್ಷೇತ್ರಕ್ಕೆ ಹೊಸ ಕೊಡುಗೆ - ಕಣಬಂದೂರಿನಲ್ಲಿ ಶ್ರೀ ಶಿವ ರಾಮಕೃಷ್ಣ ಸ್ಕೂಲ್ ನೂತನ ಕಟ್ಟಡಕ್ಕೆ ಅಡಿಗಲ್ಲು…

18 hours ago

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ

ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ತೀವ್ರ ವಾಗ್ದಾಳಿ Former Education Minister Kimmane Ratnakar…

20 hours ago

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಪಟಗುಪ್ಪ ಸೇತುವೆ ಬಳಿಯ ಹಿನ್ನೀರಿನಲ್ಲಿ ಅನಾಮಧೇಯ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ An unidentified man’s partially decomposed…

20 hours ago