Headlines

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide


ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ.


ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.



ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು ವರ್ಷಗಳ ಹಿಂದೆ ರಾಮಮೂರ್ತಿ ಅಸುನೀಗಿದ್ದಾರೆ. ಮಗಳೊಂದಿಗೆ ತಾಯಿ ಮನೆಯಲ್ಲಿ ವಾಸವಾಗಿದ್ದ ಅನಿತಾ ಇಂದು ನೇಣಿಗೆ ಶರಣಾಗಿದ್ದಾಳೆ.



ಈ ನಡುವೆ ನಾಗೇಂದ್ರ ಎಂಬಾತ ಈ ಮಹಿಳೆಗೆ ಪರಿಚಯವಾಗಿದ್ದನು. ಇಬ್ಬರ ನಡುವೆ ಪ್ರೀತಿ ಇತ್ತು ಎಂದು ಹೇಳಲಾಗುತ್ತಿದೆ. ನಾಗೇಂದ್ರನಿಗೆ ಈಗಾಗಲೇ ಮದುವೆಯಾಗಿತ್ತು ಎನ್ನಲಾಗಿದೆ.

ಯುವತಿಯ ಕುಟುಂಬ ಈ ನಾಗೇಂದ್ರನ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಾಗಿದೆ. 

ಪ್ರಕರಣ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.



Leave a Reply

Your email address will not be published. Required fields are marked *