ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು.
ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ ಜಾತ್ರೆ ನಡೆಯುತ್ತದೆ.
ಉತ್ತಮ ಆರೋಗ್ಯ ರೋಗ-ರುಜಿನಗಳು ಬರದಂತೆ. ತಾವು ಬೆಳೆದ ಕೃಷಿ ಮತ್ತು ಕೃಷಿ ಉತ್ಪನ್ನಗಳು. ಸಾಕು ಪ್ರಾಣಿಗಳ ಸಂರಕ್ಷಣೆ. ಮಕ್ಕಳಾಗದಿದ್ದರೆ ಮಕ್ಕಳಾಗುವ ಬಗ್ಗೆ ತಮ್ಮ ಇಷ್ಟಾರ್ಥಗಳು ನೆರವೇರಲಿ ಎಂದು ಭಕ್ತರು ಹರಕೆಯನ್ನು ಹೊರುತ್ತಾರೆ. ಮಾರಿಕಾಂಬ ದೇವಿಯ ದರ್ಶನದಿಂದ ಲಕ್ಷಾಂತರ ಜನರು ಒಳಿತನ್ನು ಕಂಡಿದ್ದಾರೆ, ಕಾಣುತ್ತಲೂ ಇದ್ದಾರೆ.
ಈ ಸಂಧರ್ಭದಲ್ಲಿ ದೇವಸ್ಥಾನ ಆಡಳಿತ ಸಮಿತಿ,ಕಂದಾಯ ಇಲಾಖೆ ,ಮುಜರಾಯಿ ಇಲಾಖೆ ಹಾಗೂ ರಕ್ಷಣ ಇಲಾಖೆಯವರು ಉಪಸ್ಥಿತರಿದ್ದು ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿದರು.