ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ.
ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ ವೇಳೇ ಊರಿಗೆ ಬಂದಿದ್ದ ಹೆಂಡಿತಿಯ ಜೊತೆಗೆ ಜಗಳ ತೆಗೆದಿದ್ಧಾನೆ. ಕೆಲಸ ಬಿಟ್ಟು ಬಾ ಜೊತೆಗೆ ಎಂದು ಕರೆದ ಪತಿರಾಯ, ಇದೇ ವಿಚಾರಕ್ಕೆ ಜಗಳವಾಡಿದ್ಧಾನೆ. ಅಲ್ಲದೆ ಕೆಲಹೊತ್ತು ಬಿಟ್ಟು ಮನೆಯಿಂದ ಹೊರಹೋಗಿ, ಕ್ಯಾನ್ವೊಂದರಲ್ಲಿ ಆಸಿಡ್ ತಂದು ಪತ್ನಿಯ ಮೇಲೆ ಎರಚಿದ್ಧಾನೆ.
ಆಸಿಡ್ ಎರಚಿದ ಬೆನ್ನಲ್ಲೆ ಸಂತ್ರಸ್ತೆ ನೆಲದ ಮೇಲೆ ಬಿದ್ದು ಒದ್ದಾಡಿದ್ಧಾಳೆ. ತಕ್ಷಣವೇ, ಸಂತ್ರಸ್ತೆಯ ತಾಯಿ ಹಾಗು ಸ್ಥಳೀಯರು ಆಕೆಯನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಆಕೆ ನೀಡಿದ ದೂರಿನನ್ವಯ ಕೇಸ್ ದಾಖಲಾಗಿದೆ.
ಜಗಳ ಹೆಚ್ಚಾದ ಪರಿಣಾಮ ಒಂದು ವರ್ಷದ ಹಿಂದೆ ತುಮಕೂರಿಗೆ ಹೋದ ರವಿ ಮಗನೊಂದಿಗೆ ಅಲ್ಲೇ ಇದ್ದನು. ಇದರಿಂದ ಜೀವನೋಪಾಯಕ್ಕಾಗಿ ಮಹಿಳೆ ಬೆಂಗಳೂರಿನ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ಇಬ್ಬರು ಹೆಣ್ಣುಮಕ್ಕಳನ್ನ ಶಾಂತಿನಗರದಲ್ಲಿ ನೆಲೆಸಿರುವ ತಾಯಿ ಮನೆಯಲ್ಲಿ ಬಿಟ್ಟಿದ್ದರು.
ಬೆಂಗಳೂರಿನಿಂದ ಬಂದು ಆಗಾಗ್ಗೆ ಮಕ್ಕಳನ್ನ ತಾಯಿಯನ್ನ ನೋಡಿಕೊಳ್ಳುತ್ತಿದ್ದರು. ಮೊನ್ನೆ ಮಗನೊಂದಿಗೆ ಭದ್ರಾವತಿಗೆ ಬಂದಿದ್ದ ರವಿ ಪತ್ನಿಯ ಮನೆಗೆ ಬಂದಿದ್ದನು. ಆ ವೇಳೆಯೂ ಪತ್ನಿಗೆ ಅವ್ಯಾಚ್ಯ ಶಬ್ದಗಳಿಂದ ಬೈದಿದ್ದಾನೆ. ನಿನ್ನೆ ಮಹಿಳೆಯ ತಾಯಿ ಮತ್ತು ಮಕ್ಕಳು ಹೊರಗೆ ಹೋದಾಗ ರವಿ ಮದ್ಯ ಸೇವಿಸಿ ಪತ್ನಿಯ ಮನೆಗೆ ಬಂದಿದ್ದಾನೆ. ಗಾರ್ಮೆಂಟ್ಸ್ ಕೆಲಸ ಬೇಡ ನನ್ನೊಂದಿಗೆ ಬಾ ಎಂದು ಕರೆದಿದ್ದಾನೆ. ಗಾರ್ಮೆಂಟ್ಸ್ ಕೆಲಸ ಬಿಟ್ಟು ಮಣ್ಣು ತಿನ್ನಲಾ ಎಂದು ಪತ್ನಿ ಮರು ಪ್ರಶ್ನಿಸಿದ್ದಾಳೆ.
ನಾನು ಕರೆದರೆ ಬರುವುದಿಲ್ಲ ಎಂದು ರೊಚ್ಚಿಗೆದ್ದ ರವಿ ಹೊರಗಡೆಯಿಂದ ಬಿಳಿ ಕ್ಯಾನ್ ತಂದು ಅದರಲ್ಲಿದ್ದ ಬಿಳಿ ದ್ರವ್ಯವನ್ಬ ಪತ್ನಿಯ ಮೈಮೇಲೆ ಎರಚಿದ್ದಾನೆ. ಸುಟ್ಟ ಅನುಭವ ಉಂಟಾಗಿ ಮನೆಯಲ್ಲೇ ಪತ್ನಿ ಬಿದ್ದು ಒದ್ದಾಡಿದ್ದಾಳೆ. ಆ ವೇಳೆ ತಾಯಿ ಮತ್ತು ಮಕ್ಕಳು ಹೊರಗಡೆ ಹೋದವರು ಬಂದಿದ್ದಾರೆ. ತಕ್ಷಣವೇ ಮೆಗ್ಗಾನ್ ಗೆ ದಾಖಲಿಸಲಾಗಿದೆ.
ರಫ಼ಿ ರಿಪ್ಪನ್ ಪೇಟೆನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್