ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ಕ್ಯಾಂಟರ್ ಹಾಗೂ ಕಾರಿನ ನಡುವೆ ಡಿಕ್ಕಿ…!!!
ಸಾಗರ ತಾಲೂಕಿನ ಆನಂದಪುರ ಪೊಲೀಸ್ ಸ್ಟೇಷನ್ ಸಮೀಪದಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಆನಂದಪುರದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಹಾಗೂ ಸಿದ್ದೇಶ್ವರ ಕಾಲೋನಿಯಿಂದ ಆನಂದಪುರದ ಕಡೆಗೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿನ(KA 17 M 9578) ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಈ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾದ ಗಾಯವಾಗಿದ್ದು ತಕ್ಷಣ ಅವರನ್ನು ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದಲ್ಲಿ ಸಿದ್ದೇಶ್ವರ ಕಾಲೋನಿಯ ನಿವಾಸಿ ಶಶಿಧರ್ ಅವರ ಕಾಲಿಗೆ ತೀವ್ರವಾದ ಪೆಟ್ಟಾಗಿದೆ ಹಾಗೂ ಅವರ ಪತ್ನಿಯ ತಲೆಗೆ ಬಲವಾದ ಹೊಡೆತ ಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.